ಚಿಕ್ಕಮಗಳೂರು

ಜೆಡಿಎಸ್‌ಗೆ ಸೇರುತ್ತಿರುವವರ ಸಂಖ್ಯೆ ಹೆಚ್ಚಳ

Published On :

ಕ.ಪ್ರ ವಾರ್ತೆ, ಚಿಕ್ಕಮಗಳೂರು, ಏ.13
ವಿವಿಧ ಪಕ್ಷಗಳ ಕಾರ್ಯವೈಖರಿಗಳಿಗೆ ಬೇಸತ್ತು ಜೆಡಿಎಸ್‌ಗೆ ಸೇರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು  ಮಾಜಿ ಶಾಸಕ ಎಸ್.ಎಲ್. ಧರ್ಮೇಗೌಡ ಹೇಳಿದ್ದಾರೆ.
  ಕೆಜೆಪಿ ಮುಖಂಡ ಜಾಕೀರ್ ಹುಸೇನ್ ಪಕ್ಷ ತೊರೆದ ಹಿನ್ನಲೆಯಲ್ಲಿ ಜೆಡಿಎಸ್‌ಗೆ ಸ್ವಾಗತಿಸಿ ಮಾತನಾಡಿದ ಧರ್ಮೇಗೌಡ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಭ್ರಷ್ಟಾಚಾರಯುಕ್ತ ಆಡಳಿತಕ್ಕೆ ಎಲ್ಲೆಡೆ ಜನ ಬೇಸತ್ತಿದ್ದಾರೆ. ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಅಭಿವೃದ್ಧಿ ಮತ್ತು ಜನಪರ ಕಾಳಜಿ ಕಂಡು ಜೆಡಿಎಸ್ ಪಕ್ಷದ ಮೂಲಕ ಜನಸಾಮಾನ್ಯರಿಗೆ ಸಹಾಯ ಮಾಡಬೇಕೆಂಬ ಮಹದಾಸೆ ಹೊಂದಿ ಕೆಜೆಪಿ ತೊರೆದು ಬಂದಿದ್ದಾರೆ ಎಂದರು.     ಸೇವಾ ಮನೋಭಾವನೆ ಮೈಗೂಡಿಸಿಕೊಂಡು ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವ ಸಂಕಲ್ಪ ಮಾಡಿದರೆ  ಪ್ರಜಾಪ್ರಭುತ್ವ ಎತ್ತಿ ಹಿಡಿಯಲು ಸಹಕಾರಿಯಾಗುತ್ತದೆ ಎಂದು ಹೇಳಿದರು.    ಅಲ್ಪಸಂಖ್ಯಾತ ವಿಭಾಗದ ತಾ. ಅಧ್ಯಕ್ಷ ಜಾಕಿರ್ ಹುಸೇನ್, ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಅನಿಲ್  ಕುಮಾರ್ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.