ಚಿಕ್ಕಮಗಳೂರು

30ರೊಳಗೆ ಪಾವತಿಮಾಡಿದರೆ ತೆರಿಗೆ ರಿಯಾಯಿತಿ

Published On :

ಕ.ಪ್ರ ವಾರ್ತೆ, ನರಸಿಂಹರಾಜಪುರ, ಏ.12
ಪಪಂ ವ್ಯಾಪ್ತಿಯ ಆಸ್ತಿಗಳ 2013-14ನೇ ಸಾಲಿನ ಸ್ವಯಂಘೋಷಿತ ಸಾಲಿನ ಆಸ್ತಿ ತೆರಿಗೆಯನ್ನು 2013 ಏ.30ರ ಒಳಗೆ ಪ್ರಸ್ತಾವಿಸಿದರೆ ಶೇ.5ರ ರಿಯಾಯಿತಿ ಪಡೆಯಬಹುದಾಗಿದೆ ಎಂದು ಪಪಂ ಮುಖ್ಯಾಧಿಕಾರಿ ಡಿ.ನಾಗೇಂದ್ರ ತಿಳಿಸಿದ್ದಾರೆ.
ಆಸ್ತಿ ತೆರಿಗೆ ಮತ್ತು ನೀರಿನ ತೆರಿಗೆಯನ್ನು ಯಾವುದೇ ದಂಡವಿಲ್ಲದೆ ಪಾವತಿಸಲು ಜೂ.30 ಕಡೆಯ ದಿನವಾಗಿದೆ. ಜೂ.30ರ ನಂತರ ಪಾವತಿಸಿದರೆ ಶೇ.2ರಷ್ಟು ದಂಡ ವಿಧಿಸಲಾಗುವುದು. ತಪ್ಪಿದಲ್ಲಿ ಅಂತಹ ಕಟ್ಟಡಗಳಿಗೆ ನೀರಿನ ಸಂಪರ್ಕ ಕಡಿತಗೊಳಿಸಲಾಗುವುದು. ಜಫ್ತಿ, ವಾರೆಂಟ್‌ನಂತಹ ಕಠಿಣ ಕ್ರಮಕ್ಕೂ ಮುಂದಾಗಬಹುದು. ಆದ್ದರಿಂದ  ಸಾರ್ವಜನಿಕರು ತೆರಿಗೆಯನ್ನು ಸಕಾಲದಲ್ಲಿ ಪಾವತಿಸಲು ಮುಂದಾಗಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಮಾಂಸ ಮಾರಾಟ ನಿಷೇಧ
ಚಿಕ್ಕಮಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಭಾನುವಾರ ನಗರದಲ್ಲಿ ಪ್ರಾಣಿ ಹಿಂಸೆ ನಿಷೇಧಿಸಲಾಗಿದೆ. ಅಂದು ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ. ನಗರಸಭೆ ವ್ಯಾಪ್ತಿಯ ಎಲ್ಲ ಕಸಾಯಿಖಾನೆಗಳನ್ನು ಅಂದು ಮುಚ್ಚುವಂತೆ ಮತ್ತು ಮಾಂಸ ಮಾರಾಟ ಮಾಡದಂತೆ ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ನಗರಸಭೆ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.