ಚಿಕ್ಕಮಗಳೂರು

ವಿಧವೆ ಮೇಲೆ ನೌಕರನೊಬ್ಬ ಹಲ್ಲೆ: ದೂರು ದಾಖಲು

Published On :

ಮೂಡಿಗೆರೆ: ತಾಲೂಕಿನ ಕಳಸ ಸಮೀಪದ ಸಂಸೆ ಗ್ರಾಪಂ ವ್ಯಾಪ್ತಿಯ ಟೀ ಎಸ್ಟೇಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವಿಧವೆ ಮಹಿಳೆಯೊಬ್ಬರ ಮೇಲೆ ಅದೇ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ನೌಕರನೊಬ್ಬ ಹಲ್ಲೆ ಮಾಡಿರುವ ಬಗ್ಗೆ ವರದಿಯಾಗಿದೆ.
ಭಾನುವಾರ ರಾತ್ರಿ ಸಂಸೆಯ ಕುಟ್ಟಿಗೆಕೊಂಡ ಎಂಬಲ್ಲಿದ್ದ ತಮ್ಮ ಮನೆಯಲ್ಲಿ ಮಗಳೊಂದಿಗೆ ಮಲಗಿದ್ದ ಸಮಯದಲ್ಲಿ. ರಾತ್ರಿ ಸಮೀಪದ ಟೀ ಎಸ್ಟೇಟ್‌ನಲ್ಲಿ ವಾಸವಿದ್ದ ನಾಗರಾಜ ಎಂಬವ ತನ್ನ ಮನೆಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ಬೈದು, ದೊಣ್ಣೆಯಿಂದ ಥಳಿಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಹೇಳಿದ್ದಾರೆ.
ಮಹಿಳೆಯ ಕೈ ಹಾಗೂ ಬೆನ್ನಿಗೆ ತೀವ್ರ ಸ್ವರೂಪದ ಗಾಯಗಳಾಗಿ ಕಳಸದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಕುದುರೇಮುಖ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.