ಚಿಕ್ಕಮಗಳೂರು

ಅಪಘಾತ: ವ್ಯಕ್ತಿ ಸಾವು

Published On :

ಚಿಕ್ಕಮಗಳೂರು: ನಗರದ ಹೊರ ವಲಯದ ಮೌಂಟೆನ್ ವ್ಯೂ ಶಾಲೆಯ ಬಳಿ ಭಾನುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನುಳಿದ ನಾಲ್ವರಿಗೆ ಗಾಯಗಳಾಗಿವೆ. ಮಹೇಶ್ (30) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಕೇಶ್, ಮುರುಳಿ, ಮಾಲತೇಶ್, ರಾಜೇಶ್ ಎಂಬವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಚಿಕ್ಕಮಗಳೂರು ನಿವಾಸಿಗರಾದ ಇವರು ಭಾನುವಾರ ರಜೆ ದಿನವಾಗಿದ್ದರಿಂದ ಬಾಬಾಬುಡನ್‌ಗಿರಿಗೆ ಹೋಗಿ ಸಂಜೆ ವೇಳೆಗೆ ನಗರಕ್ಕೆ ಕಾರಿನಲ್ಲಿ ವಾಪಸ್ ಬರುತ್ತಿದ್ದರು. ಆಗ ಮೌಂಟೆನ್ ವ್ಯೂ ಶಾಲೆಯ ಸಮೀಪದಲ್ಲಿ ಚಾಲಕನ ಅಜಾಗರೂಕತೆಯಿಂದ ಕಾರ್ ಸೇತುವೆಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಡಿಕ್ಕಿ ಹೊಡೆದು ನಂತರ ರಸ್ತೆಯ ಸಮೀಪದಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಆಗ ಕಾರಿನಲ್ಲಿದ್ದ ಮಹೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದ ಗಾಯಾಳುಗಳಿಗೆ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಮತ್ತು ಮಂಗಳೂರಿಗೆ ಕರೆದುಕೊಂಡು ಹೋಗಲಾಯಿತು. ಚಿಕಿತ್ಸೆ ಪಡೆಯುತ್ತಿರುವವರ ಪೈಕಿ ರಾಕೇಶ್ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ.ಚಿಕ್ಕಮಗಳೂರು ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ನೀರಿನ ವಿಚಾರದ ಜಗಳ
ಮೂಡಿಗೆರೆ: ತಾಲೂಕಿನ ಕಳಸ ಸಮೀಪದ ಇಡಕಿಣಿ ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ವಿಚಾರವಾಗಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬರು ಆಸ್ಪತ್ರೆ ಸೇರಿದ ಘಟನೆ ವರದಿಯಾಗಿದೆ.  ಶನಿವಾರ ಸಂಜೆ ಯಳಂದೂರು ಗ್ರಾಮದ ಕೃಷ್ಣೇಗೌಡ ಎಂಬವರು ಬಸ್ತಿಹಡ್ಲು ಎಂಬಲ್ಲಿ ಸಾರ್ವಜನಿಕ ನೀರು ಕಾಲುವೆಯಿಂದ ತನ್ನ ಜಮೀನಿಗೆ ನೀರು ಬಿಟ್ಟು ವಾಪಾಸು ಬರುವ ಸಂದರ್ಭದಲ್ಲಿ ಮೂರು ಜನರ ತಂಡ ದಾರಿಯಲ್ಲಿ ಅಡ್ಡಗಟ್ಟಿ ದೊಣ್ಣೆಯಿಂದ ಮಾರಾಣಾಂತಿಕ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.  ಹಲ್ಲೆ ಮಾಡಿದ ಅದೇ ಊರಿನ ಬಾಲು, ಅಶೋಕ ಗೌಡ, ಬೋಬೇಗೌಡ ನೀರಿನ ವಿಚಾರವಾಗಿ ಆಗಾಗ ಜಗಳ ತೆಗೆಯುತ್ತಿದ್ದು ಶನಿವಾರ ಹೊಡೆದಿದ್ದಾರೆ ಎಂದು ತಿಳಿಸಿದ್ದಾರೆ.  ಕೃಷ್ಣೇಗೌಡರ ಮುಖ, ಬೆನ್ನು, ಕಾಲುಗಳಿಗೆ ಹೊಡೆತ ಬಿದ್ದಿದ್ದು ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಪ್ರಕರಣ ಕಳಸ ಠಾಣೆಯಲ್ಲಿ ದಾಖಲಾಗಿದೆ.
ಇಂದು ಬೀಳ್ಕೊಡುಗೆ
ಚಿಕ್ಕಮಗಳೂರು: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡಿ. ಮಲ್ಲಾರೆಡ್ಡಿ ಅವರಿಗೆ ಬೀಳ್ಕೊಡುಗೆ ಹಾಗೂ ನುಡಿ ಸಿಂಚನ ಕಾರ್ಯಕ್ರಮ ಸೋಮವಾರ ಸಂಜೆ 6 ಗಂಟೆಗೆ ನಗರದ ಭುವನೇಂದ್ರ ವಿದ್ಯಾಸಂಸ್ಥೆಯಲ್ಲಿ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.