ಇಂದಿನಿಂದ 17ರವರೆಗೆ ಕಾನೂನು ಸಾಕ್ಷರಥಾ ರಥ
ಕ.ಪ್ರ ವಾರ್ತೆ, ಚಿಕ್ಕಮಗಳೂರು, ಏ.14
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿವಿಧ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಏ. 15 ರಿಂದ 17ರವರೆಗೆ ಕಾನೂನು ಸಾಕ್ಷರಥಾ ರಥ ನಗರದಲ್ಲಿ ಸಂಚರಿಸಲಿದೆ.
ಏ. 15 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ರಧಾನ ಜಿಲ್ಲಾ ನ್ಯಾಯಾಧೀಶ ಬಸವರಾಜ ಎ. ಪಾಟಿಲ್ ಅವರು, ಇದಕ್ಕೆ ಚಾಲನೆ ನೀಡಲಿದ್ದು, ವಕೀಲರ ಸಂಘದ ಅಧ್ಯಕ್ಷ ಕೆ.ಎಂ. ಅಬ್ದುಲ್ ಜಬ್ಬಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಅಂದು ಮಧ್ಯಾಹ್ನ 12.30 ಗಂಟೆಗೆ ಕಾನೂನು ಸಾಕ್ಷರಥಾ ರಥವು ಸರ್ವೋದಯ ಸಂಸ್ಥೆ, ಕದ್ರಿಮಿದ್ರಿ, ಸಂಜೆ 5ಕ್ಕೆ ಮತ್ತಾವರ ಅರಣ್ಯ ಮಾಹಿತಿ ಕೇಂದ್ರ, ಏ. 16 ರಂದು ಬೆಳಿಗ್ಗೆ 10 ಗಂಟೆಗೆ ಎಂ.ಇ.ಎಸ್. ಪದವಿ ಕಾಲೇಜು, ಮಧ್ಯಾಹ್ನ 12.30ಕ್ಕೆ ರಂಗನಾಥ ವಿದ್ಯಾಸಂಸ್ಥೆ, ಸಂಜೆ 5 ಗಂಟೆಗೆ ನಗರದ ಮೆಸ್ಕಾಂ ಕಚೇರಿ ಆವರಣ, ಏ. 17 ರಂದು ಬೆಳಿಗ್ಗೆ 10 ಗಂಟೆಗೆ ಸರಕಾರಿ ಐ.ಟಿ.ಐ., ಮಧ್ಯಾಹ್ನ 12.30ಕ್ಕೆ ಎಂ.ಕೆ.ಎಸ್. ಕಾನೂನು ಕಾಲೇಜು, ಸಂಜೆ 5 ಗಂಟೆಗೆ ಜಿಲ್ಲಾಸ್ಪತ್ರೆ ಆವರಣಕ್ಕೆ ಭೇಟಿ ನೀಡಲಿದೆ.
ಕಾನೂನು ಸಾಕ್ಷರಥಾ ರಥ ಭೇಟಿ ನೀಡುವ ಸ್ಥಳಗಳಲ್ಲಿ ತಜ್ಞರಿಂದ ಉಪನ್ಯಾಸ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

