ನೀರು ಕೊಡದಿದ್ದರೆ ಮತದಾನ ಬಹಿಷ್ಕಾರ
ಕ.ಪ್ರ ವಾರ್ತೆ, ಚಿಕ್ಕಮಗಳೂರು, ಏ.15
ಕುಡಿಯಲು ನೀರು ಕೊಡದಿದ್ದರೆ ಮತದಾನವನ್ನು ಬಹಿಷ್ಕರಿಸಲು ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮಸ್ಥರು ತೀರ್ಮಾನಿಸಿದ್ದಾರೆ.
ಈ ಕುರಿತು ತಕ್ಷಣ ತೀರ್ಮಾನ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಫ್ಯಾಕ್ಸ್ ಮೂಲಕ ರವಾನೆ ಮಾಡಿರುವ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಸುಮಾರು ವರ್ಷಗಳಿಂದ ಬಣಕಲ್ನಲ್ಲಿ ಅತಿದೊಡ್ಡ ಸಮಸ್ಯೆಯಾಗಿ ಕಾಡುತ್ತಿರುವ ವಿಷಯ ನೀರಿನ ಸಮಸ್ಯೆ. ಈ ಪರಿಸ್ಥಿತಿ ಎಷ್ಟರ ಮಟ್ಟಿಗೆ ಇದೆ ಎಂದರೆ, ಅದನ್ನು ಕನಸಿನಲ್ಲೂ ನೆನೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಮೂರು ವರ್ಷಗಳಿಂದ ಬಣಕಲ್ ಗ್ರಾಮಕ್ಕೆ ಪ್ರಕೃತಿ ನೀರು ಸೌಲಭ್ಯ ಒದಗಿಸಿ ಕೊಡಲು ಸುಮಾರು ರು. 1.20 ಕೋಟಿಯ ಯೋಜನೆ ತಯಾರಿಸಿ ಅದನ್ನು ಒಂದು ವರ್ಷದ ಮೊದಲು ಮಂಜೂರಾದ ಮೊತ್ತದಲ್ಲಿ ಕಾರ್ಯ ರೂಪಕ್ಕೆ ತರಲಾಗಿದೆ.
ಆದರೆ, ಇದರ ಕಳಪೆ ಕಾಮಗಾರಿಯಿಂದಾಗಿ ಗ್ರಾಮಸ್ಥರಿಗೆ ಇಂದಿಗೂ ನೀರು ಸರಬರಾಜು ಆಗಿಲ್ಲ. ಪ್ರಕೃತಿ ನೀರು ಬಣಕಲ್ ಗ್ರಾಮಕ್ಕೆ ಇಲ್ಲದಂತಾಗಿದೆ. ಆದ್ದರಿಂದ ಬಣಕಲ್ ಗ್ರಾಮದ ಜನರು ದಿನನಿತ್ಯದ ಬಳಕೆಗೆ ನೀರಿಲ್ಲದೆ ಪರದಾಡುವ ಸ್ಥಿತಿ ಉಂಟಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ಪ್ರಕೃತಿ ನೀರಿನ ಬಗ್ಗೆ ಮಾಹಿತಿಯ ಪ್ರಕಾರ, ಈ ಯೋಜನೆಯಲ್ಲಿ ದಿನದ 24 ಗಂಟೆ ಪ್ರಕೃತಿ ನೀರು ನೀಡುತ್ತೇವೆಂದು ಈ ಯೋಜನೆಯ ಅಧಿಕಾರಿಗಳು ಮತ್ತು ಚುನಾಯಿತ ಸದಸ್ಯರು ಭರವಸೆ ನೀಡಿದ್ದರು. ಆದರೆ, ಇಲ್ಲಿವರೆಗೆ ಭರವಸೆಯಾಗಿಯೇ ಉಳಿದುಕೊಂಡಿದೆ. ಈ ಯೋಜನೆಯ ಬಗ್ಗೆ ಸಮಗ್ರ ಮಾಹಿತಿ ನೀಡಬೇಕು. ಕುಡಿಯಲು ನೀರು ಕೊಡದೆ ಹೋದರೆ ಮತದಾನ ಬಹಿಷ್ಕರಿಸಲಾಗುವುದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

