ಮೇ 2ರಂದು ಮತದಾನ ಅರಿವು ಕಾರ್ಯಕ್ರಮ
ಕ.ಪ್ರ. ವಾರ್ತೆ, ಚಿಕ್ಕಮಗಳೂರು, ಏ.16
ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಹಾಗೂ ಅರಿವು ಮೂಡಿಸಲು ಮೇ 2ರಂದು ಚಿಕ್ಕಮಗಳೂರು ನಗರದಲ್ಲಿ ಬೃಹತ್ ಮಾನವ ಸರಪಳಿ ನಡೆಸಲಾಗುವುದು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಶಿವಶಂಕರ್ ಹೇಳಿದ್ದಾರೆ.
ಮಂಗಳವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಮತ್ತು ಚುನಾವಣೆಯಲ್ಲಿ ಪಾಲ್ಗೊಳ್ಳುವಿಕೆ (ಸ್ವೀಪ್) ಅನುಷ್ಠಾನದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ಪ್ರಮುಖ ರಸ್ತೆಗಳಲ್ಲಿ ಈ ಮಾನವ ಸರಪಳಿ ಹಾದು ಹೋಗಲಿದೆ. ವಿದ್ಯಾರ್ಥಿಗಳು, ಯುವಜನ ಸಂಘಟನೆಗಳು, ಅಂಗನವಾಡಿ ಕಾರ್ಯಕರ್ತೆಯರು, ಸರಕಾರಿ ನೌಕರರ ಸಂಘ, ಆಶಾ ಕಾರ್ಯಕರ್ತೆಯರು, ಸ್ವಸಹಾಯ ಸಂಘಗಳ ಸದಸ್ಯರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸಿದ್ಧತೆ; ಸಾರ್ವಜನಿಕರೂ ಈ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಮೇ 2 ರಂದು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲೂ ಪ್ರತ್ಯೇಕ ಮಾನವ ಸರಪಳಿ ನಡೆಯಲಿದೆ. ಇದಕ್ಕಾಗಿ ಎಲ್ಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದರು.
ಇದಲ್ಲದೆ ಏಪ್ರಿಲ್ 29 ರಂದು ಕ್ಯಾಂಡಲ್ ಲೈಟ್ ನಡಿಗೆ ಕಾರ್ಯಕ್ರಮ ನಡೆಯಲಿದೆ. ಏಪ್ರಿಲ್ 30 ರಂದು ಚಿಕ್ಕಮಗಳೂರು ನಗರದಲ್ಲಿ ಮ್ಯಾರಥಾನ್ ಓಟವನ್ನೂ ಏರ್ಪಡಿಸಲಾಗಿದೆ. ಈ ಮೂಲಕ ಚುನಾವಣೆ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಮತದಾನ ಮಾಡಲು ಪ್ರೇರೇಪಿಸಲಾಗುತ್ತದೆ ಎಂದು ಶಿವಶಂಕರ್ ಹೇಳಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

