ಪಿಬಿಶ್ರೀಯವರಿಗೆ ಶ್ರದ್ಧಾಂಜಲಿ
ಚಿಕ್ಕಮಗಳೂರು: ನಗರದ ಹನುಮಂತಪ್ಪ ವೃತ್ತದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಆಗಲಿದ ಗಾನ ಗಾರುಡಿಗ ಡಾ.ಪಿ.ಬಿ. ಶ್ರೀನಿವಾಸರವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಮಕ್ಕಳ ತಜ್ಞ ಡಾ.ಜೆ.ಪಿ. ಕೃಷ್ಣೇಗೌಡ ಅವರು ಡಾ.ಪಿ.ಬಿ. ಶ್ರೀನಿವಾಸರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅಭಿಮಾನಿಗಳಾದ ಎ.ಎನ್. ಮೂರ್ತಿ, ಕೆ.ಎಸ್. ಗುರುವೇಶ್, ಪಿ.ಸಿ. ರಾಜೇಗೌಡ, ಅನಿಲ್ ಕುಮಾರ್, ಗಿರಿಧರ್ ಯತೀಶ್, ಚಂದ್ರಮೌಳಿ ಮಾತನಾಡಿದರು.
ಜಿಲ್ಲಾ ಅಭಿಮಾನಿಗಳ ಸಂಘದ ಸ್ಥಾಪಕ ಅಧ್ಯಕ್ಷ ಬಿ.ಎಂ. ಕುಮಾರ್ ಸ್ವಾಗತಿಸಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶೇಖರ್ ಅಂಚನ್ ವಂದಿಸಿದರು. ಡಾ. ಪಿ.ಬಿ. ಶ್ರೀನಿವಾಸರವರಿಗೆ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.
ವ್ಯಾಸಾಂಗಕ್ಕೆ ಅನುಮತಿ
ಶೃಂಗೇರಿ: ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾ ನಿರತ ಶಿಕ್ಷಕರಿಗೆ ಉನ್ನತ ಶಿಕ್ಷಣ ಪಡೆಯಲು ಸರ್ಕಾರ ಅನುಮತಿ ಕಲ್ಪಿಸಿ ಆದೇಶ ಹೊರಡಿಸಿದೆ. ವಿಜ್ಞಾನ ಹಾಗೂ ಇತರೆ ಪದವಿ ಶಿಕ್ಷಣ ಪಡೆಯಲು ಅವಕಾಶವಿದೆ. ಉನ್ನತ ಶಿಕ್ಷಣ ಪಡೆಯಲು ಬಯಸುವ ಆಸಕ್ತ ಶಿಕ್ಷಕರು ಕೂಡಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
ಒಟ್ಟು 12 ನಾಮಪತ್ರ
ಸೊರಬ: ಪ್ರಸಕ್ತ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದ್ದ ಬುಧವಾರ, ಬಿಎಸ್ಪಿಯಿಂದ ಗುಡ್ಡಪ್ಪ, ಪಕ್ಷೇತರ ಅಭ್ಯರ್ಥಿಯಾಗಿ ಕೆ. ಗುರುಮೂರ್ತಿ ಓಟೂರು, ಬಿಎಸ್ಪಿ ಬಂಡಾಯ ಅಭ್ಯರ್ಥಿ ಗುಡವಿ ಬಸವಣ್ಯಪ್ಪ, ಸಂಯುಕ್ತ ಜನತಾದಳದಿಂದ ಸತ್ಯನಾರಾಯಣ್, ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ಭೀಮಪ್ಪ ನಾಮಪತ್ರ ಸಲ್ಲಿಸಿದರು.
ಕೆಜೆಪಿ ಅಭ್ಯರ್ಥಿ ಹಾಲಪ್ಪ, ಬಿಜೆಪಿ ಅಭ್ಯರ್ಥಿ ಚಿಕ್ಕಾವಲಿ ನಾಗರಾಜಗೌಡ, ಬಾಸೂರು ಚಂದ್ರೇಗೌಡ, ಬಿ ಫಾರಂ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

