'ರಾಜ್ಯವನ್ನು ದುರ್ಭಿಕ್ಷೆಗೆ ತಳ್ಳಿದ ಬಿಜೆಪಿ'
ಕ.ಪ್ರ ವಾರ್ತೆ, ತರೀಕೆರೆ, ಏ.17
ಬಿಜೆಪಿ ಸರ್ಕಾರ ರಾಜ್ಯವನ್ನು ದುರ್ಭಿಕ್ಷೆಗೆ ತಳ್ಳಿದೆ ಎಂದು ಎಐಸಿಸಿ ಸದಸ್ಯೆ ವಿಧಾನ ಪರಿಷತ್ ಸದಸ್ಯೆ ಮೋಟಮ್ಮ ಆರೋಪಿಸಿದ್ದಾರೆ.
ಅವರು ಬುಧವಾರ ತರೀಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಎಚ್. ಶ್ರೀನಿವಾಸ್ ನಾಮಪತ್ರ ಸಲ್ಲಿಸಿದ ಹಿನ್ನಲೆಯಲ್ಲಿ ಪಟ್ಟಣದ ಬಯಲು ರಂಗ ಮಂದಿರದಲ್ಲಿ ಏರ್ಪಾಡಾಗಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಖಚಿತ: ಬಿಜೆಪಿ ಮತ್ತು ಕೆಜೆಪಿ ಒಂದೇ ನಾಣ್ಯದ ಎರಡು ಮುಖಗಳು. ಇಡೀ ರಾಜ್ಯವನ್ನು ದುರ್ಬಿಕ್ಷಕ್ಕೆ ತಳ್ಳಿದ್ದಾರೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದು ಖಚಿತ. ತಾವೆಲ್ಲಾ ಕಂಕಣಬದ್ದರಾಗಬೇಕು, ಕಾಂಗ್ರೆಸನ್ನು ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಲ್. ಮೂರ್ತಿ ಮಾತನಾಡಿ, ಈ ಚುನಾವಣೆ ಒಂದು ಐತಿಹಾಸಿಕ ದಾಖಲೆಯಾಗಿದೆ. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ, ಯುವ ರಾಜಕಾರಣಿ ಜಿ.ಎಚ್. ಶ್ರೀನಿವಾಸ್ ಅವರನ್ನು ಕಾಂಗ್ರೆಸ್ ತರೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಘೋಷಿಸಿದೆ. ಯುವ ರಾಜಕಾರಣಿ ಸ್ಪರ್ಧಿಸುವುದು ಬೇಡವೆ ಎಂದು ಪ್ರಶ್ನಿಸಿದ ಅವರು ಎಲ್ಲರೂ ಆರ್ಹರೇ ಇದ್ದಾರೆ. ಪಕ್ಷದ ಟಿಕೆಟ್ ಸಿಗದವರು ಬೇಸರಪಡಬಾರದು, ಪ್ರಾಮಾಣಿಕ ಜನನಾಯಕ ಸಿದ್ದರಾಮಯ್ಯ ಸಿಎಂ ಆಗಬೇಕು. ಎಲ್ಲರೂ ಸೇರಿ ಕಾಂಗ್ರೆಸ್ ಗೆಲ್ಲಿಸಿ ಕೊಡಬೇಕು, ಸಿದ್ದರಾಮಯ್ಯ, ಪರಮೇಶ್‌ಗೆ ನಿಮ್ಮ ಮತ ಎಂದು ತಿಳಿಸಿದರು.
ಪಕ್ಷದ ಜಿಲ್ಲೆಯ ಐದು ಕ್ಷೇತ್ರದ ಅಭ್ಯರ್ಥಿಗಳು ಪ್ರಾಮಾಣಿಕರು. ನಿಮ್ಮ ಹಣ ನಿಮ್ಮ ಅಭಿವೃದ್ಧಿಗೆ ಉಪಯೋಗವಾಗಬೇಕು. ಜನರನ್ನು ರಕ್ಷಿಸುವವರು ಸಿಎಂ ಆಗಬೇಕು ಎಂದರು.
ಹುಲಿ ಯೋಜನೆ: ಸಂಸದ ಜಯಪ್ರಕಾಶ್ ಹೆಗಡೆ ಮಾತನಾಡಿ, ಜಿ.ಎಚ್.ಶ್ರೀನಿವಾಸ್ ಅವರನ್ನು ಪಕ್ಷದ ಹೈಕಮಾಂಡ್ ಅಭ್ಯರ್ಥಿಯಾಗಿ ಆರಿಸಿದೆ. ಎಲ್ಲರ ಬಗೆಗೂ ಗೌರವವಿದೆ. ಎಲ್ಲರೂ ಬನ್ನಿ ಪಕ್ಷ ಗೆಲ್ಲಿಸೋಣ. ಹುಲಿ ಯೋಜನೆ ರಾಜ್ಯ ಸರ್ಕಾರ ಹುಟ್ಟು ಹಾಕಿದ್ದು. ಬಿಜೆಪಿ ಮೂರು ಭಾಗವಾಗಿದೆ, ಬಿಜೆಪಿ ಜನವಿರೋಧಿ ಕೆಲಸ ಮಾಡಿದೆ, ಶಿಕ್ಷಣ, ಆರೋಗ್ಯ ಇವೆಲ್ಲಾ ಕೇಂದ್ರ ಸರ್ಕಾರದ ಯೋಜನೆಗಳು. ಮೋಟಮ್ಮ ಸ್ತ್ರೀ ಶಕ್ತಿ ಸಂಘಗಳನ್ನು ಹುಟ್ಟುಹಾಕಿದ್ದಾರೆ. ಈ ಎಲ್ಲಾ ಯೋಜನೆಗಳನ್ನು ಕಾರ್ಯಕರ್ತರು ಪ್ರತಿ ಮನೆಗೆ ತಲುಪಿಸಿ ಎಂದು ತಿಳಿಸಿದರು. ಕೇಂದ್ರ ಸಚಿವ ಥಾಮಸ್ ಮಾತನಾಡಿ,ದರು.
ಕಾಂಗ್ರೆಸ್ ಅಭ್ಯರ್ಥಿ ಜಿ.ಎಚ್. ಶ್ರೀನಿವಾಸ್, ಜಿ. ಕಾಂಗ್ರೆಸ್ ಕಾರ್ಯದರ್ಶಿ ಸಮೀವುಲ್ಲಾ ಷರೀಫ್, ಜಿಲ್ಲಾ ಖಚಾಂಚಿ ಬಿ.ಎಸ್.ಆರ್. ಮಂಜುನಾಥ್, ಟಿ.ಎನ್.ಎನ್. ಗೋಪನಾಥ್, ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಎನ್. ಲೋಹಿತ್, ಡಾ. ಮರುಳುಸಿದ್ದಪ್ಪ, ಮೋಹನ್‌ಕುಮಾರ್, ದೋರನಾಳ್ ಪರಮೇಶ್, ಪಕ್ಷದ ಕಾರ್ಯಕರ್ತರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಮೋಹನ್‌ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

