ಜಿಲ್ಲೆಯಲ್ಲಿ ಜೆಡಿಎಸ್ ಗೆಲುವು: ವಿಶ್ವಾಸ
ತರೀಕೆರೆ: ಈ ಸಾರಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ಖಚಿತ ಎಂದು ರಾಜ್ಯ ಜೆಡಿಎಸ್ ಉಪಾಧ್ಯಕ್ಷೆ ಪದ್ಮಾವತಮ್ಮ ತಿಳಿಸಿದ್ದಾರೆ.
ಪಕ್ಷದ ಅಭ್ಯರ್ಥಿ ಟಿ.ಆರ್.ನಾಗರಾಜ್ ಸರಳ ವ್ಯಕ್ತಿಯಾಗಿದ್ದು ಪಟ್ಟಣದಲ್ಲಿ ಬಹಳ ವರ್ಷಗಳಿಂದ ಅನೇಕ ರೀತಿಯ ಸಾಮಾಜಿಕ ಸೇವೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿಕೊಂಡು ಬಂದಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಹಿಂದೆ ಸೂಚನೆ ನೀಡಿದಂತೆ ಪಕ್ಷ ಟಿ.ಆರ್.ನಾಗರಾಜ್ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಗುರುತಿಸಿದೆ ಎಂದು ಅವರು ಇತ್ತೀಚೆಗೆ ಪತ್ರಕಾಗೋಷ್ಠಿಯಲ್ಲಿ ತಿಳಿಸಿದರು.
ಶ್ರೀಗಂಧ ರಕ್ಷಣಾ ವೇದಿಕೆಯ ಟಿ.ಎನ್.ವಿಶುಕುಮಾರ್ ಮಾತನಾಡಿ, ಟಿ.ಆರ್.ನಾಗರಾಜ್ ಅವರು ಪ್ರಾಮಾಣಿಕವಾಗಿ ಸಾಮಾಜಿಕ ಸೇವೆಯನ್ನು ನಿರ್ವಹಿಸಿದ್ದಾರೆ, ಇದೀಗ ಜೆಡಿಎಸ್ ಪಕ್ಷದಿಂದ ಕ್ಷೇತ್ರದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ, ಹೆಚ್ಚಿನ ಬಹುಮತ ನೀಡಿ ನಾಗರಾಜ್ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಎಲ್ಲ ಕಡೆ ಗೆಲುವು: ಟಿ.ಆರ್.ನಾಗರಾಜ್ ಮಾತನಾಡಿ ಬಹಳ ಹಿಂದಿನಿಂದಲೂ ಪುರಸಭಾಧ್ಯಕ್ಷನಾಗಿ ಪಟ್ಟಣದಲ್ಲಿ ಅನೇಕ ರೀತಿಯ ಅಭಿವೃದ್ದಿ ಕಾರ್ಯಗಳನ್ನು ನಿರ್ವಹಿಸಿದ್ದೇನೆ. ಇದೀಗ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದೇನೆ. ಎಲ್ಲರೂ ಮತ ನೀಡಿ ತಮ್ಮನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

