ಇಂದಿನಿಂದ ರಾಮನವಮಿ ಉತ್ಸವ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಏ.18
ನಗರದ ಬಸವನಹಳ್ಳಿ ಬಡಾವಣೆಯಲ್ಲಿರುವ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಏ. 19 ರಿಂದ 25ರವರೆಗೆ ರಾಮನವಮಿ ಉತ್ಸವ ನಡೆಯಲಿದೆ.
ಶುಕ್ರವಾರ ಸಂಜೆ 6 ಗಂಟೆಗೆ ಬ್ರಾಹ್ಮಣ ಮಹಾಸಭೆ ತಾಲೂಕು ಅಧ್ಯಕ್ಷ ಡಿ.ಎಚ್. ನಟರಾಜ್ ಅವರು ರಾಮನವಮಿ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ವೇಣುಗೋಪಾಲಸ್ವಾಮಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಸ್. ಭಾರ್ಗವ ಶ್ರೀಧರ್, ಪತ್ರಕರ್ತ ಸ. ಗಿರಿಜಾಶಂಕರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಕೆ.ಎಸ್. ನಾರಾಯಣಮೂರ್ತಿ, ಅಕ್ಕಿಕಾಳು ವೆಂಕಟೇಶ್, ನಂಜಮ್ಮ ಹಾಗೂ ಎಚ್.ಎಸ್. ನಾಗೇಶ್ ಅವರನ್ನು ಸನ್ಮಾನಿಸಲಾಗುವುದು ಎಂದು ರಾಮೋತ್ಸವ ಸೇವಾ ಸಮಿತಿ ಅಧ್ಯಕ್ಷ ಎ.ವಿ. ಅನಂತರಾಮಯ್ಯ ತಿಳಿಸಿದ್ದಾರೆ.
ಸಂಗೀತ ಕಾರ್ಯಕ್ರಮ: ಏ. 20 ರಂದು ಸಂಜೆ 7 ಗಂಟೆಗೆ ಬೆಂಗಳೂರಿನ ವಿ. ಸಂಗೀತ, ಕಿಶನ್ ಮತ್ತು ವೃಂದದವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಲಿದೆ. ಏ. 21 ರಂದು ಮೂಲದೇವರಿಗೆ ಪಂಚಾಮೃತ ಅಭಿಷೇಕ, ವಿಶೇಷ ಪೂಜಾ ಕಾರ್ಯಕ್ರಮ ಬೆಳಗ್ಗೆ 9ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಜರುಗಲಿದೆ. ಇದೇ ಸಂದರ್ಭದಲ್ಲಿ ಶ್ರೀರಾಮತಾರಕ ಹೋಮ ಹಾಗೂ ಶ್ರೀರಾಮ ಪಟ್ಟಾಭಿಷೇಕ ನಡೆಯಲಿದೆ. ಏ. 22 ರಂದು ರಾಮವೇಷ ಸ್ಪರ್ಧೆ, ಭಗವದ್ಗೀತೆ ಕಂಠಪಾಠ ಸ್ಪರ್ಧೆ, ರಂಗೋಲಿ ಸ್ಪರ್ಧೆ ನಡೆಯಲಿದೆ. ಸಂಜೆ 7 ಗಂಟೆಗೆ ಭರತನಾಟ್ಯ ಕಾರ್ಯಕ್ರಮ ಜರುಗಲಿದೆ.
ಏ. 23 ರಂದು ಬೆಂಗಳೂರಿನ ವಿದುಷಿ ಎಂ.ಆರ್. ಮಂಜುಳ ಮತ್ತು ತಂಡದಿಂದ ವೀಣಾವಾದನ, 24 ರಂದು ನಮ್ರತ ಭಾರದ್ವಾಜ್ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ. 25ರಂದು ಜ್ಯೋತಿಪ್ರಕಾಶ್ ಅವರಿಂದ ಭರತನಾಟ್ಯ ನಡೆಯಲಿದೆ.
ಶೃಂಗೇರಿ ಪೀಠಕ್ಕೆ ಸಚಿವ ಥಾಮಸ್ ಭೇಟಿ
ಶೃಂಗೇರಿ: ಇಲ್ಲಿನ ಶ್ರೀ ಶಾರದಾ ಪೀಠಕ್ಕೆ ಕೇಂದ್ರ ಆಹಾರ ಸಚಿವ ಕೆ. ಥಾಮಸ್ ಬುಧವಾರ ಭೇಟಿ ನೀಡಿದರು.
ಶ್ರೀ ಶಾರದಾಂಬೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಂತರ ತೋರಣ ಗಣಪತಿ, ಶ್ರೀ ಶಂಕರಾಚಾರ್ಯ ದೇವಾಲಯ, ವಿದ್ಯಾಶಂಕರ ದೇವಾಲಯಗಳಿಗೆ ತೆರಳಿ ದರ್ಶನ ಪಡೆದರು.
ನಂತರ ನರಸಿಂಹವನದಲ್ಲಿನ ಗುರುನಿವಾಸಕ್ಕೆ ತೆರಳಿ ಶ್ರೀ ಭಾರತೀ ತೀರ್ಥರನ್ನು ಭಟೀ ಮಾಡಿ ಆಶೀರ್ವಚನ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

