ಚಿಕ್ಕಮಗಳೂರು

ಅಕ್ರಮ ಮದ್ಯ ಸಾಗಾಟ: ವ್ಯಕ್ತಿ ಬಂಧನ

Published On :

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಏ.19
ತಾಲೂಕಿನ ವಸ್ತಾರೆ ಗ್ರಾಮದ ವಿ.ಆರ್. ದೇವರಾಜ ಎಂಬುವವರು ಆಲದಗುಡ್ಡೆಯ ಮಧೀನ ಹೋಟೆಲ್ ಮುಂಭಾಗದ ರಸ್ತೆಯಲ್ಲಿ ದ್ವಿ ಚಕ್ರ ವಾಹನದಲ್ಲಿ ಅಕ್ರಮವಾಗಿ 8.640 ಲೀಟರ್ ಮದ್ಯವನ್ನು ಸಾಗಾಣಿಕೆ ಮಾಡುತ್ತಿದ್ದಾಗ ಅಬಕಾರಿ ಅಧಿಕಾರಿಗಳು ಏ.17 ರಂದು ಅವರನ್ನು ಬಂಧಿಸಿ ಮದ್ಯ ವಶಪಡಿಸಿಕೊಂಡಿದ್ದಾರೆ.
ನಂತರ ವಿಚಾರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಚುನಾವಣೆ ಕಂಟ್ರೋಲ್ ರೂಂ
ಮೂಡಿಗೆರೆ ವಿಧಾನಸಭಾ  ಕ್ಷೇತ್ರದ ಚುನಾವಣೆಯು ಶಾಂತಿ ಸುವ್ಯವಸ್ಥೆ ಹಾಗೂ ಮುಕ್ತವಾಗಿ ನಡೆಸುವ ದೃಷ್ಟಿಯಿಂದ ಮೂಡಿಗೆರೆ ತಾಲೂಕು ಕಚೇರಿಯಲ್ಲಿ ಚುನಾವಣಾ ಕಂಟ್ರೋಲ್ ರೂಂ ಅನ್ನು ತೆರೆಯಲಾಗಿದೆ.
ಕಂಟ್ರೋಲ್ ರೂಮಿನ ಟೋ.ಪ್ರೀ ಸಂಖ್ಯೆ 1800- 4252024 ಹಾಗೂ ದೂರವಾಣಿ ಸಂಖ್ಯೆ 08263- 220204, 220695, 222044 ಆಗಿದ್ದು ಸಾರ್ವಜನಿಕರು ಚುನಾವಣಾ ಸಂಬಂಧ ದೂರು ಅಥವಾ ಸಲಹೆಗಳನ್ನು ದೂರವಾಣಿ ಮೂಲಕ ಅಥವಾ ಖುದ್ದಾಗಿ ಭೇಟಿ ಮಾಡಿ ಸಲ್ಲಿಸಬಹುದು ಎಂದು ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.