ಪಠ್ಯ ಪೂರಕ ಚಟುವಟಿಕೆಯಿಂದ ಸಾಮರ್ಥ್ಯ ವೃದ್ಧಿ
ಕ.ಪ್ರ ವಾರ್ತೆ, ನರಸಿಂಹರಾಜಪುರ, ಏ.19
ಪಠ್ಯಕ್ಕೆ ಪೂರಕವಾದ ಚಟುವಟಿಕೆಗಳಿಂದ ವಿದ್ಯಾರ್ಥಿಗಳಲ್ಲಿರುವ ಸಾಮರ್ಥ್ಯ, ಪ್ರತಿಭೆ ಹೊರ ಬರಲಿದೆ ಎಂದು ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯದ ಕನ್ನಡ ಸಹ ಪ್ರಾಧ್ಯಾಪಕ ಡಾ.ಬಿ. ಗಣಪತಿ ತಿಳಿಸಿದರು.
ಅವರು ಶುಕ್ರವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2012-13ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್ಎಸ್ಎಸ್ ಚಟುವಟಿಕೆಗಳು ಹಾಗೂ ವಿಜ್ಞಾನ, ಕಲಾ, ವಾಣಿಜ್ಯ, ವ್ಯವಹಾರ ನಿರ್ವಹಣೆ, ಸಮಾಜಕಾರ್ಯಗಳ ವೇದಿಕೆಗಳ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದರು.
ವಿದ್ಯಾರ್ಥಿಗಳು ಅಹಂಕಾರ ಬಿಟ್ಟು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಹಿರಿಯರನ್ನು ಗೌರವದಿಂದ ಕಾಣುವ ಗುಣ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕ್ರೀಡೆಯಿಂದ ಆರೋಗ್ಯ: ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಎ.ಎಲ್. ವಿಜಯಕುಮಾರ್ ಮಾತನಾಡಿ, ಆಧುನಿಕ ಒತ್ತಡದ ಬದುಕಿನಲ್ಲಿ ಕ್ರೀಡೆಯಿಂದ ಆರೋಗ್ಯ ಉತ್ತಮಗೊಳ್ಳಲಿದೆ. ಆತ್ಮವಿಶ್ವಾಸ, ದೈಹಿಕ ಧೃಡತೆ ಹೆಚ್ಚಾಗಲಿದೆ ಎಂದರು.
ಸಭೆಯ ಅಧ್ಯಕ್ಷತೆಯನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ. ಪೂರ್ಣೇಶ್ ವಹಿಸಿದ್ದರು. ಇದೇ ಸಂದರ್ಭದಲ್ಲಿ ಕಾಲೇಜಿನಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ್ದ ಅತಿಥಿ ಉಪನ್ಯಾಸಕ ನಾಗೇಶ್ ಅವರನ್ನು ಅಭಿನಂದಿಸಲಾಯಿತು.
ಕ್ರೀಡಾ ಸಂಚಾಲಕ ಹಾಗೂ ಉಪನ್ಯಾಸಕ ಪ್ರೊ. ವಿಶ್ವನಾಥ್ ಕ್ರೀಡಾ ವರದಿ ವಾಚಿಸಿದರು. ಮಾಲಿನಿ ಪ್ರಾರ್ಥಿಸಿ, ಶ್ರೀನಿಧಿ ಮತ್ತು ಆಕರ್ಶ ಕಾರ್ಯಕ್ರಮ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

