ಪಾರದರ್ಶಕ ಆಡಳಿತಕ್ಕೆ ಕಾಂಗ್ರೆಸ್ ಬೆಂಬಲಿಸಿ
ಕಪ್ರವಾರ್ತೆ,ಚಿಕ್ಕಮಗಳೂರು, ಏ.19
ಕ್ಷೇತ್ರದ ಅಭಿವೃದ್ಧಿಗೆ, ಸಾಮಾನ್ಯ ವರ್ಗಗಳ ಏಳಿಗೆಗೆ, ಪಾರದರ್ಶಕ ಆಡಳಿತಕ್ಕಾಗಿ ಕಾಂಗ್ರೆಸ್ ಬೆಂಬಲಿಸುವಂತೆ ಪಕ್ಷದ ಅಭ್ಯರ್ಥಿ ಕೆ.ಎಸ್. ಶಾಂತೇಗೌಡ ಮತದಾರರಿಗೆ ಮನವಿ ಮಾಡಿದ್ದಾರೆ.
ನಗರದ ಟಿಪ್ಪುನಗರ, ಶರೀಯ್ಗಲ್ಲಿ, ಕೋಟೆ ವಿವಿಧ ಬಡಾವಣೆಗಳಲ್ಲಿ ಮನೆ ಮನೆಗೆ ತೆರಳಿ ಶುಕ್ರವಾರ ಮತಯಾಚಿಸಿ ಮಾತನಾಡಿದ ಅವರು, ಅಭಿವೃದ್ಧಿಗೆ ನನ್ನ ಪ್ರಥಮ ಆಧ್ಯತೆ. ಕ್ಷೇತ್ರದಲ್ಲಿ ಹಲವು ಹಗರಣ ಮತ್ತು ಭ್ರಷ್ಟಚಾರದಲ್ಲಿ ಭಾಗಿಯಾಗಿರುವ ಬಿಜೆಪಿಯಿಂದ ಜನ ಬೆಸತ್ತಿದ್ದಾರೆ. ರಾಜ್ಯದಲ್ಲಿ ಮತ್ತು ಜಿಲ್ಲೆಯಲ್ಲಿ ಈ ಭಾರಿ ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಹೆಚ್ಚು ಒಲವು ತೋರಿಸುತ್ತಿದ್ದಾರೆ ಎಂದು ಅವರು ಹೇಳಿದರು.
ಕ್ಷೇತ್ರ ಜನತೆಗೆ ಸುಳ್ಳು ಭರವಸೆ ನೀಡದೆ ಎಲ್ಲಾ ವರ್ಗದವರನ್ನು ಸಮಾನ ದೃಷ್ಟಿಯಿಂದ ನೋಡಿಕೊಂಡು ಭ್ರಷ್ಟಚಾರ ರಹಿತ ಆಡಳಿತ ನೀಡುತ್ತೇನೆ. ಗ್ರಾಮೀಣ ಭಾಗದಲ್ಲಿ ಹಲವು ಸಮಸ್ಯೆಗಳಿಗೆ ಇಂದಿಗೂ ಪರಿಹಾರ ದೊರೆತಿಲ್ಲ. ಮತದಾರರು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಯಾವುದೇ ಬಣ್ಣದ ಮಾತಿಗೆ ಬೆರಗಾಗದೆ ಕ್ಷೇತ್ರದ ಅಭಿವೃದ್ಧಿಗಾಗಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್ ಉರಾಳ್, ನಗರಸಭೆ ಸದಸ್ಯ ಹೆಚ್.ಎಸ್. ಪುಟ್ಟಸ್ವಾಮಿ, ಷಹಬುದ್ದೀನ್ ಮತ್ತು ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚಿಸಿದರು.
--
ತಾಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ
ಕಡೂರು: ಸ್ಥಳೀಯ ಮುಖಂಡರನ್ನು ಕಡೆಗಣಿಸಿದ ಬಿಜೆಪಿ ಜಿಲ್ಲಾ ಮುಖಂಡರ ನಡವಳಿಕೆಯಿಂದ ಬೇಸತ್ತು ತಾವು ತಾಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸುತ್ತಿದ್ದು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಮುಂದುವರಿಯುವುದಾಗಿ ಕೆ.ಎಚ್.ಎ. ಪ್ರಸನ್ನ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಅವರು, ಟಿಕೆಟ್ ಹಂಚಿಕೆ ವಿಚಾರದಲ್ಲಿ ಜಿಲ್ಲಾ ನಾಯಕರು ಕೈಗೊಂಡ ನಿರ್ಣಯದಿಂದ ಬೇಸತ್ತು ರಾಜಿನಾಮೆ ಸಲ್ಲಸುತ್ತಿದ್ದೇನೆ. ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಎಂದರು. ಗೋಷ್ಠಿಯಲ್ಲಿ ಕೆ.ಜಿ. ಲೋಕೇಶ್ವರ್, ಹೊ.ರಾ. ಕೃಷ್ಣಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

