ಚಿಕ್ಕಮಗಳೂರು

'ಬರಹಗಳು ಸಮಾಜಕ್ಕೆ ಪ್ರೇರಣೆ ನೀಡಲಿ'

Published On :

ಕ.ಪ್ರ.ವಾರ್ತೆ, ತರೀಕೆರೆ, ಏ.19
ಬರಹಗಳು ಸಮಾಜಕ್ಕೆ ಪ್ರೇರಣೆ ನೀಡುವಂತಿರಬೇಕು ಎಂದು ಮುಖಂಡ ಎನ್. ಮಂಜುನಾಥ್ ತಿಳಿಸಿದ್ದಾರೆ.
ಪಟ್ಟಣದ ಸಾಲುಮರದಮ್ಮನವರ ದೇವಸ್ಥಾನದ ಆವರಣದಲ್ಲಿ ಟಿ.ಎಸ್. ಈಶ ಅವರ ಪ್ರಧಾನ ಸಂಪಾದಕತ್ವದ “^ÚOÚÃÈÚãÀÔÚ’ ಪಾಕ್ಷಿಕ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.
ಪತ್ರಿಕೆ ಸಮಾಜಮುಖಿಯಾಗಿರಬೇಕು, ವಾಸ್ತವಿಕತೆಯಿಂದ ಕೂಡಿರಲಿ, ಚಕ್ರವ್ಯೂಹ ಪಾಕ್ಷಿಕ ಪತ್ರಿಕೆ ಬಿಡುಗಡೆಯಾಗುತ್ತಿರುವುದು ಎಲ್ಲರಿಗೂ ಸಂತೋಷವಾಗಿದೆ ಎಂದು ಹೇಳಿದರು.
ಸಮಾಜದ ಹಿತ ಕಾಯಲಿ: ಭದ್ರಾವತಿ ಸರ್.ಎಂ.ವಿ. ಕಾಲೇಜು ಪ್ರಾಂಶುಪಾಲರಾದ ಡಾ. ಆಯಿಷಾ ಭಾರತಿ ಅವರು ಚಕ್ರವ್ಯೂಹ ಪಾಕ್ಷಿಕ ಪತ್ರಿಕೆ ಬಿಡುಗಡೆ ನೆರವೇರಿಸಿ ಮಾತನಾಡಿ, ಪತ್ರಿಕೆ ಸಮಾಜದ ಹಿತಕ್ಕಾಗಿ ದುಡಿಯಲಿ, ಶೋಷಿತರ, ದುರ್ಬಲರ ಧ್ವನಿಯಾಗಲಿ ಸಮಾಜದ ಹಿತ ಕಾಪಾಡಲಿ ಎಂದು ತಿಳಿಸಿದರು.
ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಸುರೇಶ್ ಚಂದ್ರ ಅವರು ಮಾತನಾಡಿ, ಪತ್ರಿಕೆ ಸಮಾಜದ ಅಂಕು-ಡೊಂಕುಗಳನ್ನು ತಿದ್ದಲಿ ಎಂದು ತಿಳಿಸಿದರು.
ಎಆರ್‌ಕೆ ಶ್ರೀನಿವಾಸ್ ಮಾತನಾಡಿದರು. ಅಕ್ಬರ್ ಭಾಷ, ನಯಾಜ್ ಪಾಷ,  ನಾಗರತ್ನಮ್ಮ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.