25 ರಂದು ಪ್ರಚಾರಕ್ಕೆ ಸಿಎಂ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಏ.19
ಚುನಾವಣಾ ಪ್ರಚಾರಕ್ಕಾಗಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಏ.25 ರಂದು ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 10.30ಕ್ಕೆ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸಖರಾಯಪಟ್ಟಣದಲ್ಲಿ ನಡೆಯಲಿರುವ ಚುನಾವಣಾ ಪ್ರಚಾರದಲ್ಲಿ ಮುಖ್ಯಮಂತ್ರಿಯವರು ಭಾಗವಹಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಖರಾಯಪಟ್ಟಣದ ನಂತರದಲ್ಲಿ ಮುಖ್ಯಮಂತ್ರಿಯವರು ಕಡೂರು ಹಾಗೂ ತರೀಕೆರೆಯಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶಿವಮೊಗ್ಗಕ್ಕೆ ತೆರಳಲಿದ್ದಾರೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಏ. 22 ರಂದು ಮೂಡಿಗೆರೆಯಲ್ಲಿ ನಡೆಯಲಿರುವ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಅಪಪ್ರಚಾರವೇ ಅಜೆಂಡವಾಗಿದೆ. ಈಗಾಗಲೇ ಕ್ಷೇತ್ರದಲ್ಲಿ ಒಂದು ಸುತ್ತಿನ ಪ್ರಚಾರವನ್ನು ತಾವು ಮುಗಿಸಿದ್ದು, ಹಲವು ಪಕ್ಷಗಳ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಬಿಜೆಪಿಗೆ ಬರುತ್ತಿದ್ದಾರೆ. ಅಭಿವೃದ್ಧಿ ಗೆಲ್ಲುತ್ತದೆ. ಅಪಪ್ರಚಾರಕ್ಕೆ ಮನ್ನಣೆ ಇಲ್ಲ ಎಂಬುದನ್ನು ಕಳೆದ ನಗರಸಭಾ ಚುನಾವಣೆಯಲ್ಲಿ ಮತದಾರರು ತೋರಿಸಿಕೊಟ್ಟಿದ್ದಾರೆ. ಎಲ್ಲಾ ಪಕ್ಷಗಳ ಮತ ಬ್ಯಾಂಕ್‌ಗಳಿಗೆ ಬಿಜೆಪಿ ಲಗ್ಗೆ ಹಾಕಿದೆ ಎಂದರು.
ಅಶ್ವಾಸನೆ ಮತ್ತು ಭರವಸೆ ಆಧಾರದ ಮೇಲೆ ಬಿಜೆಪಿ ಮತಗಳನ್ನು ಕೇಳುತ್ತಿಲ್ಲ. ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿದ್ದೇವೆ. ವೋಟ್ ಕೊಡಿ ಎಂದು ಕೇಳುತ್ತಿದ್ದೇವೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

