ಚಿಕ್ಕಮಗಳೂರು

25ರಂದು ಜಿಲ್ಲೆಗೆ ಸೋನಿಯಾ

Published On :

ಚಿಕ್ಕಮಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಏ.25 ರಂದು ಚಿಕ್ಕಮಗಳೂರಿಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಗೆ ಚಿಕ್ಕಮಗಳೂರಿಗೆ ಆಗಮಿಸಲಿರುವ ಅವರು, ಇಲ್ಲಿನ ಜಿಲ್ಲಾ ಆಟದ ಮೈದಾನದಲ್ಲಿ ನಡೆಯಲಿರುವ ಕಾಂಗ್ರೆಸ್‌ನ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ವಕ್ತಾರ ಮಹೇಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜಿಲ್ಲೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಅವರು ಪ್ರಚಾರ ಭಾಷಣ ಮಾಡಲಿದ್ದಾರೆ. ನಂತರ ಮಂಗಳೂರಿಗೆ ತೆರಳಲಿದ್ದಾರೆ ಎಂದು ಹೇಳಿದರು.
ಇಂದಿನಿಂದ ಜೆಡಿಎಸ್ ಪ್ರಚಾರ
ಮೂಡಿಗೆರೆ: ಜೆಡಿಎಸ್ ಅಭ್ಯರ್ಥಿ ಬಿ.ಬಿ. ನಿಂಗಯ್ಯರವರು ಏ.21ರಿಂದ ಮೇ 1ರ ವರೆಗೆ ತಾಲೂಕಿನ ಪ್ರತಿ ಹೋಬಳಿಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಜೆಡಿಎಸ್ ಕ್ಷೇತ್ರಾಧ್ಯಕ್ಷ ಉಮಾಪತಿ ತಿಳಿಸಿದ್ದಾರೆ.  ಜೆಡಿಎಸ್ ಅಭ್ಯರ್ಥಿ ಬಿ.ಬಿ. ನಿಂಗಯ್ಯ ಏ.21ರಂದು ಬಾಳೂರು ಹೋಬಳಿ, 22.ಆವತಿ, 23.ಅಂಬಳೆ, 24.ಮೂಡಿಗೆರೆ ಕಸಬಾ, 25.ಗೋಣಿಬೀಡು,26.ಮೂಡಿಗೆರೆ ಕಸಬಾ, 27.ಆಲ್ದೂರು, 28.ಕಳಸ, 29.ಬಣಕಲ್, 30.ವಸ್ತಾರೆ. ಮೇ1ರಂದು ಆಲ್ದೂರು ಹಾಗೂ ಗೋಣಿಬೀಡು, 2.ಕಳಸ ಮತ್ತು ಬಣಕಲ್‌ನಲ್ಲಿ ಪ್ರವಾಸ ಮಾಡಲಿದ್ದಾರೆಂದು ತಿಳಿಸಿದ್ದಾರೆ.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.