ಇಂದು ಬೃಹತ್ ಸಾರ್ವಜನಿಕ ಸಭೆ
ಚಿಕ್ಕಮಗಳೂರು: ನ್ಯಾಯ ಸಮ್ಮತ ಚುನಾವಣೆ ಎದುರಿಸುವ ಹಿನ್ನೆಲೆಯಲ್ಲಿ ಸಿರಿಗೆರೆ ಶ್ರೀ ತರಳಬಾಳು ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಏ.21 ಭಾನುವಾರ ನಗರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಹಮ್ಮಿಕೊಂಡಿದ್ದಾರೆ.
ಭಾನುವಾರ ಸಂಜೆ 4 ಗಂಟೆಗೆ ನಗರದ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ ನಡೆಯುವ ಸಭೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳು, ಪಕ್ಷಗಳ ಜಿಲ್ಲಾ ಅಧ್ಯಕ್ಷರುಗಳು ಪಾಲ್ಗೊಳ್ಳಲಿದ್ದಾರೆ ಎಂದು ಸರ್ವಪಕ್ಷಗಳ, ಪಕ್ಷೇತರರ ಸೌಹಾರ್ಧ ಸಮಿತಿಯ ಸಂಚಾಲಕರಾದ ಎಲ್.ವಿ. ಬಸವರಾಜು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಲು, ಮತದಾರರನ್ನು ಜಾಗೃತಿಗೊಳಿಸಲು ಹಮ್ಮಿಕೊಂಡಿರುವ ಸಭೆಯಾಗಿದ್ದು, ಎಲ್ಲಾ ಪಕ್ಷಗಳ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಲು ಅವಕಾಶವಿದೆ. ಇದು ಸಭೆಯು ಯಾವುದೇ ನಿರ್ಧಿಷ್ಟ ಮತಧರ್ಮಕ್ಕೆ ಸಂಬಂಧಪಡದೆ ಎಲ್ಲಾ ಧರ್ಮಗುರುಗಳು ಸಹ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಯಾವುದೇ ಅಭ್ಯರ್ಥಿಯ ಪರವಾಗಿ ಅಥವಾ ವಿರೋಧವಾಗಿ ಘೋಷಣೆ ಕೂಗುವಂತಿಲ್ಲ. ಯಾವುದೇ ಅಭ್ಯರ್ಥಿಯ ಪರ ಮತ ಯಾಚಿಸಲೂ ಅವಕಾಶವಿರುವುದಿಲ್ಲ. ಅಭ್ಯರ್ಥಿ ಒಳಗೊಂಡಂತೆ ಎಲ್ಲರೂ ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮನವಿ ಮಾಡಿದ್ದಾರೆ.
ಶೃಂಗೇರಿ ಪೀಠಕ್ಕೆ ಲೋಕಾಯುಕ್ತ ಭೇಟಿ
ಶೃಂಗೇರಿ: ಇಲ್ಲಿನ ಶ್ರೀ ಶಾರದಾ ಪೀಠಕ್ಕೆ ರಾಜ್ಯದ ನೂತನ ಲೋಕಾಯುಕ್ತ ಭಾಸ್ಕರ್ ರಾವ್ ಭೇಟಿ ನೀಡಿ ಶ್ರೀ ಶಾರದಾಂಬೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ತೋರಣಗಣಪತಿ, ಶ್ರೀ ಶಂಕರಾಚಾರ್ಯ, ಶ್ರೀ ವಿದ್ಯಾಶಂಕರ ದೇಗುಲಗಳಿಗೆ ಭೇಟಿ ನೀಡಿ ದರ್ಶನ ಪಡೆದರು. ನಂತರ ನರಸಿಂಹವನದಲ್ಲಿನ ಶ್ರೀ ಗುರುನಿವಾಸಕ್ಕೆ ತೆರಳಿ ಶ್ರೀ ಭಾರತೀ ತೀರ್ಥರನ್ನು ಭೇಟಿ ಮಾಡಿ ಆರ್ಶಿವಾದ ಪಡೆದು ನಂತರ ತೆರಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

