ಚುನಾವಣಾ ಪೂರ್ವವೂ ಪಕ್ಷಾಂತರ ನಿಷೇಧ ಕಾಯ್ದೆ ಬರಲಿ: ಸಿರಿಗೆರೆ ಶ್ರೀ
ಕ.ಪ್ರ.ವಾರ್ತೆ , ಚಿಕ್ಕಮಗಳೂರು , ಏ. 21
ಚುನಾವಣಾ ಪೂರ್ವದಲ್ಲಿ ಪಕ್ಷಾಂತರ ನಿಷೇಧ ಕಾಯ್ದೆ ಜಾರಿಯಾಗಬೇಕೆಂದು ಸಿರಿಗೆರೆ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ನಡೆದ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ 'ಪರಿಶುದ್ಧ ಚುನಾವಣೆಯತ್ತ ಒಂದು ಹೆಜ್ಜೆ' ಕಾರ್ಯಕ್ರಮದಲ್ಲಿ ಶ್ರೀಗಳವರು ಆಶೀರ್ವಚನ ನೀಡಿ, ನೀತಿ ಸಂಹಿತೆಗೆ ಪೂರಕವಾಗಿ ಈ ಕಾರ್ಯಕ್ರಮ ನಡೆಸಲಾಗುತ್ತಿದೆ. ಓಟಿಗಾಗಿ ಗುರುಗಳ ಆಶೀರ್ವಾದ ಪಡೆಯಲು ಅಭ್ಯರ್ಥಿಗಳು ಹೋಗುತ್ತಾರೆ. ಆದರೆ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಗಳು ಚುನಾವಣೆಯಲ್ಲಿ ಯಾವುದೇ ಅಕ್ರಮದಲ್ಲಿ ಚುನಾವಣೆ ನಡೆಸುವುದಿಲ್ಲ ಎಂದು ಪ್ರಮಾಣ ಮಾಡಿದ್ದಾರೆ ಎಂದರು. ಮಠ ಒಂದು ಜಾತಿಗೆ ಸೇರಿದ್ದದಾರೂ ವಿಚಾರಗಳು ಮಾತ್ರ ಜಾತ್ಯತೀತವಾದುದು. ಜಾತಿಗಳನ್ನು ಅಳಿಸಲು ಸಾಧ್ಯವಿಲ್ಲ. ಮಠಗಳು ಜಾತಿ ಜಾತಿಗಳ ನಡುವೆ ಸಾಮರಸ್ಯ ಬೆಳೆಸಬೇಕು. ನಮ್ಮ ಮಠಕ್ಕೆ ಬಂದವರು ಜಾತಿಯ ಶಿಷ್ಯರಲ್ಲ. ಅವರೆಲ್ಲರೂ ವೈಚಾರಿಕ ಶಿಷ್ಯರು ಎಂದರು. ದೇಶ ಸ್ವಾತಂತ್ರವಾದಾಗ ನಡೆದ ಚುನಾವಣೆಯಲ್ಲಿ ಅಕ್ರಮ, ಭ್ರಷ್ಟಾಚಾರಗಳಿರಲಿಲ್ಲ. ದೇಶ ಪ್ರೇಮ, ಮೌಲ್ಯಗಳಿದ್ದವು. ನೀತಿಯ ಮೇಲೆ ಚುನಾವಣೆಗಳು ನಡೆಯುತ್ತಿದ್ದವು, ಈಗ ಹಾಗೇ ಇಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

