ಹಣವಿದ್ದರೆ ಮಾತ್ರ ಗೆಲವು ಸಾಧ್ಯ: ಭರತ್ ವಿಷಾದ
ಕ.ಪ್ರ.ವಾರ್ತೆ, ಮೂಡಿಗೆರೆ, ಏ.21
ಇತ್ತೀಚಿನ ರಾಜಕೀಯ ದುಗುಡ, ಆತಂಕವನ್ನು ಸೃಷ್ಟಿಸುತ್ತಿದ್ದು, ಹೋರಾಟ ಮಾಡಿ, ಜೈಲಿಗೆ ಹೋದವರಿಗೆ ಸ್ಪಂದನೆಯೇ ದೊರಕುತ್ತಿಲ್ಲ. ಕಾಸಿದ್ದರೆ ಮಾತ್ರ ಗೆಲುವು ಸಾಧ್ಯ ಎಂಬ ಸ್ಥಿತಿ ಏರ್ಪಟ್ಟಿದೆ ಎಂದು ಬಿಎಸ್ಸಾರ್ ಕಾಂಗ್ರೆಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಭರತ್ ಅಭಿಪ್ರಾಯ ಪಟ್ಟರು.
ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಕಾರ್ಮಿಕ ಸಂಘಟನೆ, ವಿದ್ಯಾರ್ಥಿ ಚಳವಳಿ, ರೈತಚಳವಳಿಗಳು ಕಾಣೆಯಾಗಿವೆ. ಹಣವೊಂದೇ ಮಾನದಂಡವಾಗಿದೆ.
ರಾಜ್ಯದಲ್ಲಿ ಬಿಜೆಪಿ, ಕೆಜೆಪಿ ಹಾಗೂಕಾಂಗ್ರೆಸ್ ಪಕ್ಷಗಳು ಪ್ರಣಾಳಿಕೆಯಲ್ಲಿ ಕಣ್ಣೊರೆಸುವ ತಂತ್ರ ನಡೆಸಿ, ಅಧಿಕಾರ ಹಿಡಿದು ಜನರನ್ನು ವಂಚಿಸುತ್ತಿವೆ. ಬೇನಾಮಿ ಆಸ್ತಿ ಮಾಡಿದ ಅಭ್ಯರ್ಥಿಗಳು ಸುಳ್ಳು ಪ್ರಮಾಣ ಪತ್ರವನ್ನು ಚುನಾವಣಾ ಆಯೋಗಕ್ಕೆ ಕೊಡುತ್ತಿದ್ದಾರೆ. ಅಲ್ಲದೆ ಮತದಾರರಿಗೆ ಹಣ, ಹೆಂಡ, ಸೀರೆ, ಮೂಗುತಿ ಕೊಟ್ಟು ಮರುಳು ಮಾಡುತ್ತಿದ್ದಾರೆ ಎಂದು ಆಪಾದಿಸಿದರು.
ಮೂಡಿಗೆರೆ ಕ್ಷೇತ್ರದಲ್ಲಿ ಬಿಎಸ್ಸಾರ್ ಪಕ್ಷ ಸಂಘಟಿಸಲು ಹೋಗಿ ರಾತ್ರಿ ಕಂಡ ಬಾವಿಯಲ್ಲಿ ಹಗಲು ಬಿದ್ದಂತಾಗಿದೆ. ಸಂಪೂರ್ಣ ನೆಲಕ್ಕಚ್ಚಿರುವ ಬಿಎಸ್ಆರ್ ಕ್ಷೇತ್ರದಲ್ಲಿ ಸ್ಪರ್ಧಿಸುವುದೇ ಬೇಡವೆನಿಸಿ ಹಿಂದೆ ಸರಿಯಲಾಯಿತು ಎಂದು ತಿಳಿಸಿದರು.
ಜೆಡಿಎಸ್ ಪಕ್ಷ ತನ್ನದೇ ಆದ ಗುರಿ ಹೊಂದಿದ್ದು. ಉತ್ತಮ ಸಮಾಜ ನಿರ್ಮಾಣಕ್ಕೆ ಜಾತ್ಯಾತೀತ ಜನತಾಪಕ್ಷದಿಂದ ಸಾಧಯ ಎಂದರು.
ಗೋಷ್ಠಿಯಲ್ಲಿ ತಾಲೂಕು ಘಟಕದ ಅಧ್ಯಕ್ಷ ಎಸ್.ಪಿ. ರಾಜುಗೌಡ, ಜಯಪಾಲ್, ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಭೋಜ ಭಂಡಾರಿ, ಲತಾ, ಸುಧಾ, ರಮ್ಯ, ರಾಜೇಶ್ವರಿ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

