ಚಿಕ್ಕಮಗಳೂರು

ಆಮಿಷವೊಡ್ಡಿ ಓಟು ಗಿಟ್ಟಿಸುವ ಪ್ರಯತ್ನ

Published On :

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಏ. 21
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದಾಗ ಮಾಡಿದ ಗ್ರಾಮಗಳ ಅಭಿವೃದ್ಧಿ ಮತ್ತು ಜನಸಾಮಾನ್ಯರ ವೈಯಕ್ತಿಕ ಯೋಜನೆಗಳ ಅನುಷ್ಠಾನವಾದ ಜೆಡಿಎಸ್ ಪಕ್ಷಕ್ಕೆ ಒಳಹರಿವು ಹೆಚ್ಚಿದೆ ಎಂದು ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಎಸ್.ಎಲ್. ಭೋಜೇಗೌಡ ಹೇಳಿದ್ದಾರೆ.
ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಭಾನುವಾರ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಹಣ ಮತ್ತು ವಸ್ತುಗಳ ರೂಪದಲ್ಲಿ ನಿರಂತರವಾಗಿ ಅಕ್ರಮವೆಸಗುತ್ತಾ ಮತದಾರರಿಗೆ ಆಮಿಷವೊಡ್ಡಿ ಓಟು ಗಿಟ್ಟಿಸುವ ಪ್ರಯತ್ನ ಮಾಡುತ್ತಿವೆ.
   ಇವುಗಳನ್ನು ತಿರಸ್ಕರಿಸಿ ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸುವುದು ಖಚಿತ ಎಂದರು.
ಎಚ್.ಡಿ. ಕುಮಾರಸ್ವಾಮಿ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಹೊಲದಗದ್ದೆ ಗಿರೀಶ್ ಮಾತನಾಡಿ, ಜೆಡಿಎಸ್ ಅಭ್ಯರ್ಥಿ ಧರ್ಮೇಗೌಡರು ಸಹಕಾರ ಕ್ಷೇತ್ರದಿಂದ ಬಂದಂತಹ ಅಪರೂಪದ ರಾಜಕಾರಣಿ. ಮಲೆನಾಡು ಭಾಗದಲ್ಲಿ ಹೈನುಗಾರಿಕೆಗೆ ಉತ್ತೇಜನ ನೀಡಬೇಕೆಂಬ ಕಾಳಜಿ ಹೊಂದಿ ನೂರಾರು ಡೈರಿಗಳನ್ನು ಸ್ಥಾಪಿಸುವ ಮೂಲಕ ರೈತರ ಸ್ವಾವಲಂಬಿ ಬದುಕಿಗೆ ಸಹಕಾರಿಯಾಗಿದ್ದಾರೆಂದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜಪ್ಪ ಮಾತನಾಡಿ, ಕಳೆದ ನಗರಸಭಾ ಚುನಾವಣೆಯಲ್ಲಿ ಸರಿಯಾಗಿ ಕೆಲಸ ಮಾಡದವರನ್ನು ಬೂತ್ ಏಜೆಂಟರಿಂದ ಕೈಬಿಡಲಾಗಿದೆ. ಪ್ರತೀ ಬೂತ್‌ಮಟ್ಟದ ಪದಾಧಿಕಾರಿಗಳಿಗೂ ಜವಾಬ್ದಾರಿ ನೀಡಲಾಗುತ್ತಿದೆ.
   ಸ್ಥಳೀಯವಾಗಿ ಆಯ್ಕೆ ಮಾಡುವ ಮುನ್ನ ಅವರ ಹಿನ್ನಲೆ ತಿಳಿದು ನಿಷ್ಠಾವಂತರನ್ನು ಆಯ್ಕೆ ಮಾಡಬೇಕು. ಪಕ್ಷದ ಜವಾಬ್ದಾರಿ ನಿರ್ವಹಿಸುವ ಸಂಪೂರ್ಣ ಶಕ್ತಿ ಹೊಂದಿರುವ ವ್ಯಕ್ತಿಗಳಿಗೆ ಆದ್ಯತೆ ನೀಡಿ ಬೂತ್ ಪದಾಧಿಕಾರಿಗಳನ್ನು ಆಯ್ಕೆ ಮಾಡುವಂತೆ ತಿಳಿಸಿದರು. ನಗರಾಧ್ಯಕ್ಷ ಜಯರಾಜೆ ಅರಸ್, ರಾಜ್ಯ ಯುವ ಘಟಕದ ಕಾರ್ಯಾಧ್ಯಕ್ಷ ಸಿ.ಎನ್. ಅಕ್ಮಲ್, ಬೆನಕ ರವಿ, ರಮೇಶ್ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.