ಚಿಕ್ಕಮಗಳೂರು

ಅಕ್ಕಮಹಾದೇವಿ ಜಯಂತಿ ನಾಳೆ

Published On :

ಭದ್ರಾವತಿ: ಪಟ್ಟಣದ ಅಕ್ಕಮಹಾದೇವಿ ಬಳಗದಿಂದ ಅಕ್ಕಮಹಾದೇವಿ ಜಯಂತಿಯನ್ನು 24ರಂದು ಗುರುವಾರ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರಳ ರೀತಿಯಲ್ಲಿ ಆಚರಿಸಲಾಗುವುದು ಎಂದು ಬಳಗದ ಸಂಚಾಲಕ ಟಿ.ಜಿ. ಬಸವರಾಜಯ್ಯ ತಿಳಿಸಿದ್ದಾರೆ.
ಅಂದು ಬೆಳಗ್ಗೆ 10.30ರಿಂದ ಸಾಮೂಹಿಕ ಪ್ರಾರ್ಥನೆ, ಪ್ರವಚನ  ಕಾರ್ಯಕ್ರಮಗಳನ್ನು ಅಕ್ಕಮಹಾದೇವಿ ಮಂದಿರದಲ್ಲಿ ನಡೆಸಲಾಗುವುದು. ನಂತರ ದಾಸೋಹ ಏರ್ಪಡಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೇಸಿಗೆ ಶಿಬಿರ
ಸೊರಬ: ಬಾಲಭವನ ಸೊಸೈಟಿ ಬೆಂಗಳೂರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೊರಬ ಇವರಿಂದ ನಡೆಸಲಾಗುವ ಮಕ್ಕಳ ಬೇಸಿಗೆ ಶಿಬಿರವನ್ನು ಇಲ್ಲಿನ ನಂದಗೋಕುಲ ಸೇವಾ ಸಂಸ್ಥೆ, ಕನ್ನಡ ಸಾಹಿತ್ಯ ಪರಿಷತ್ ಹಾಗೂ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಗಳ ಆಶ್ರಯದಲ್ಲಿ 26 ರಿಂದ 6 ರವರೆಗೆ ನಂದಗೋಕುಲ ಬಾಲವಿಕಾಸ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಆಸಕ್ತ 25-30 ಮಕ್ಕಳಿಗೆ ಮಾತ್ರ ಅವಕಾಶವಿದೆ. ಮಾಹಿತಿಗಾಗಿ, ಸಂಪನ್ಮೂಲ ವ್ಯಕ್ತಿಗಳು ಸ್ವಯಂ ಸೇವಕರು ಸಂಪರ್ಕಿಸಬಹುದು. ಸತೀಶ್ ಬೈಂದೂರ್ 9964165123, ಎಸ್. ಕೃಷ್ಣಾನಂದ್ 9945097752, ಎಚ್.ಕೆ.ಬಿ. ಸ್ವಾಮಿ 9448721730.
ಇಂದು ರೋಡ್ ಶೋ
ಚಿತ್ರದುರ್ಗ: ಕೆಜೆಪಿಯ ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿ ಎ.ವಿ. ಉಮಾಪತಿ ಅವರ ಪರ ಮುಖಂಡರಾದ ಶೋಭಾ ಕರಂದ್ಲಾಜೆ, ಎಂ.ಡಿ. ಲಕ್ಷ್ಮಿನಾರಾಯಣ, ಪಿ. ರಮೇಶ್ ಮತ್ತಿತರೆ ಮುಖಂಡರು ಮಂಗಳವಾರ ಮಧ್ಯಾಹ್ನ 3 ಗಂಟೆಗೆ ರೋಡ್ ಶೋ ನಡೆಸಲಿದ್ದಾರೆ. ನಗರದ ಸ್ಟೇಡಿಯಂ ರಸ್ತೆ, ಜಿಲ್ಲಾ ಆಸ್ಪತ್ರೆ ಮುಖಾಂತರ ಮೆಜೆಸ್ಟಿಕ್ ಸರ್ಕಲ್, ಒನಕೆ ಓಬವ್ವ ವೃತ್ತ, ಗಾಯಿತ್ರಿ ಕಲ್ಯಾಣ ಮಂಟಪದ ಮೂಲಕ ಕಾಟಮ್ಮ ಪಟೇಲ್ ವೀರನಾಗಪ್ಪ ಸಮುದಾಯ ಭವನದಲ್ಲಿ ಕೆಜೆಪಿ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.