ಕಾಮಗಾರಿ ಸ್ಥಗಿತಕ್ಕೆ ಆಯೋಗ ಸೂಚನೆ
ಚಿಕ್ಕಮಗಳೂರು: ನಗರಸಭಾ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಡಾಂಬರೀಕರಣ ಸೇರಿದಂತೆ ಇತರೆ ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳು ಸೂಚನೆ ನೀಡಿದ್ದಾರೆ. ಚುನಾವಣಾ ಸಮಯದಲ್ಲಿ ಕಾಮಗಾರಿ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕವಾಗಿ ದೂರು ಬರುತ್ತಿರುವ ಹಿನ್ನೆಲೆಯಲ್ಲಿ ಅನುಮೋದಿತ ಕುಡಿಯುವ ನೀರಿನ ಕಾಮಗಾರಿ ಹೊರತುಪಡಿಸಿ, ಚಿಕ್ಕಮಗಳೂರು ನಗರದಲ್ಲಿ ನಡೆಯುತ್ತಿರುವ ಎಲ್ಲಾ ಅಭಿವೃದ್ಧಿ ಕಾಮಗಾರಿ, ಡಾಂಬರೀಕರಣ ಕಾಮಗಾರಿಯನ್ನು ತಕ್ಷಣದಿಂದಲೇ ಸ್ಥಗಿತಗೊಳಿಸುವಂತೆ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಕೇಂದ್ರ ವೀಕ್ಷಕ ಬಾಲಕೃಷ್ಣ ಮೀನಾ ಅವರ ಸಹಮತದೊಂದಿಗೆ ಜಿಲ್ಲಾಧಿಕಾರಿ ವಿ. ಯಶವಂತ್ ಅವರು ನಗರಸಭೆ ಆಯುಕ್ತರಿಗೆ ಸೂಚಿಸಿದ್ದಾರೆ. ಮೇ 6 ರ ಬಳಿಕ ಈ ಕಾಮಗಾರಿ ಆದ್ಯತೆಯಲ್ಲಿ ಕೈಗೊಳ್ಳಬಹುದಾಗಿದೆ ಎಂದು ತಿಳಿಸಲಾಗಿದೆ.
ತ್ಯಾಜ್ಯ ವಿಲೇವಾರಿ
ಪೌರ ಘನ ತ್ಯಾಜ್ಯ ವಸ್ತುಗಳ ವ್ಯವಸ್ಥಾಪನೆ ಮತ್ತು ನಿರ್ವಹಣೆ ಆದ್ಯ ಕರ್ತವ್ಯವಾಗಿದ್ದು, ಘನ ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡದೇ, ನಿರ್ದಿಷ್ಟ ತ್ಯಾಜ್ಯ ವಿಲೇವಾರಿ ಪ್ರದೇಶಕ್ಕೆ ಸಾಗಿಸಬೇಕು. ಆದರೆ, ಕೆಲವು ಸಾರ್ವಜನಿಕರು ಹಳೇ ಕಟ್ಟಡಗಳ ಅವಶೇಷ ಮತ್ತು ಇತರೆ ತ್ಯಾಜ್ಯ ವಸ್ತುಗಳನ್ನು ನಗರಸಭೆ ಗೊತ್ತುಪಡಿಸಿದ ತ್ಯಾಜ್ಯ ವಿಲೇವಾರಿ ಜಾಗ ಬಿಟ್ಟು, ಅನ್ಯ ಪ್ರದೇಶಗಳಾದ ಕೋಟೆ ಕೆರೆ ಏರಿ ಮೇಲೆ, ದಂಟರಮಕ್ಕಿ ಕೆರೆ ಏರಿ ಮೇಲೆ ಮತ್ತು ಉಪ್ಪಳ್ಳಿಯ ಸೇತುವೆ ಬಳಿ ಹಾಗೂ ಗೇಟ್ ವೇ ಹೋಟೆಲ್ ಬಳಿ ಹಾಕುತ್ತಿರುವುದು ಕಂಡುಬಂದಿದೆ. ಇದು ಘನತ್ಯಾಜ್ಯ ವಸ್ತು ವ್ಯವಸ್ಥಾಪನೆ ಮತ್ತು ನಿರ್ವಹಣೆ ನಿಯಮ 2000 ರ ಉಲ್ಲಂಘನೆಯಾಗಿರುತ್ತದೆ ಎಂದು ನಗರಸಭೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರು ನಗರಸಭೆ ನಿರ್ದಿಷ್ಟಪಡಿಸಿದ ಇಂದಾವರ ಘನತ್ಯಾಜ್ಯ ವಿಲೇವಾರಿ ಪ್ರದೇಶಕ್ಕೆ ಸಾಗಿಸುವುದು ಕಡ್ಡಾಯವಾಗಿದೆ. ತಪ್ಪಿದಲ್ಲಿ ಕರ್ನಾಟಕ ಪೌರಸಭಾ ಅಧಿನಿಯಮ ಅನ್ವಯ 10,000 ದಂಡ ವಿಧಿಸಲಾಗುವುದಲ್ಲದೇ, ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದ್ದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

