ಚುಕ್ಕಾಣಿ ಹಿಡಿದರೆ ವೇತನ ಹೆಚ್ಚಳ
ಕ.ಪ್ರ.ವಾರ್ತ್ಣೆ ಮೂಡಿಗೆರ್ಣೆ ಏ.22
ಈ ಬಾರಿ ಜೆಡಿಎಸ್ ಪಕ್ಷ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯಲಿದ್ದು, ರೈತರ ಸಾಲ ಮನ್ನಾ ಮಾಡುವುದರ ಜತೆಗೆ ವೃದ್ಧಾಪ್ಯ ವೇತನವನ್ನು 1000 ದಿಂದ 2500ಕ್ಕೆ ಏರಿಸಲಿದ್ದು,ಅಂಗವಿಕಲ ವೇತನವನ್ನು1000 ದಿಂದ2500ಕ್ಕೆ ಏರಿಸಲಾಗುವುದು ಎಂದು ಜೆಡಿಎಸ್ ಮುಖಂಡ ಎಚ್.ಡಿ. ರೇವಣ್ಣ ಹೇಳಿದರು.
ಸೋಮವಾರ ಹೊರನಾಡಿನ ಅನ್ನಪೂರ್ಣೇಶ್ವರಿಯ ದರ್ಶನ ಪಡೆದ ನಂತರ ಕಳಸದ ಜೆಡಿಎಸ್ ಕಚೇರಿಗೆ ಬಂದು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದು ಐದು ವರ್ಷಗಳಾದರೂ ಅರ್ಹರಿಗೆ ಪಡಿತರ ಚೀಟಿಯನ್ನು ಇನ್ನು ವಿತರಿಸಲು ಸಾಧ್ಯವಾಗಲಿಲ್ಲ. ಆದರೆ, ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೇವಲ 45 ದಿನದಲ್ಲಿ ಈ ಸಮಸ್ಯೆಯನ್ನು ಪರಿಹರಿಸುತ್ತೇವೆ ಎಂದರು.
ರೈತರ ಸಮಸ್ಯೆ ಬಗ್ಗೆ ನಿರ್ಲಕ್ಷ್ಯ: ನಾವು ಆಡಳಿತ ನಡೆಸುತ್ತಿದ್ದ ಸಂದರ್ಭದಲ್ಲಿ ಬೇಸಿಗೆಯಲ್ಲಿ 9 ಗಂಟೆ ವಿದ್ಯುತ್ ನೀಡುತ್ತಿದ್ದು, ಈಗ 2 ಗಂಟೆ ವಿದ್ಯುತ್ ನೀಡಲು ಈಗಿರುವ ಸರ್ಕಾರಕ್ಕೆ ಸಾಧ್ಯವಾಗಲಿಲ್ಲ.
ಕುಡಿಯುವ ನೀರಿನ ಸಮಸ್ಯೆ, ರಸ್ತೆ ಸಮಸ್ಯೆಯ ಬಗ್ಗೆ ಬಿಜೆಪಿ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ರಾಜ್ಯದಲ್ಲಿರುವ ರೈತರ ಸಮಸ್ಯೆ, ವಿದ್ಯುತ್ ಸಮಸ್ಯೆ, ರಸ್ತೆ, ಕುಡಿಯುವ ನೀರಿನ ಸಮಸ್ಯೆಗಳನ್ನು ಜೆಡಿಎಸ್ ಅಧಿಕಾರಕ್ಕೆ ಬಂದು ಪರಿಹಾರ ಮಾಡಲಿದೆ ಎಂದರು.
ಮತ ನೀಡಲು ಮನವಿ: ಸ್ಥಳಿಯ ಇನಾಂ ಭೂಮಿ ಸಮಸ್ಯೆಯ ಬಗ್ಗೆ ಕಾರ್ಯಕರ್ತರೊಬ್ಬರು ಗಮನ ಸೆಳೆದಾಗ, ಇನಾಂ ಭೂಮಿಯ ಬಗ್ಗೆ ಎಲ್ಲಾ ವಿಚಾರಗಳನ್ನು ಇಲ್ಲಿಯ ಮುಖಂಡರಾದ ಮಂಜಪ್ಪಯ್ಯ ನನ್ನ ಗಮನಕ್ಕೆ ತಂದಿದ್ದಾರೆ.
ಈ ಸಮಸ್ಯೆ ಕೋರ್ಟ್ ಮೆಟ್ಟಿಲೇರಿದ ಪರಿಣಾಮವಾಗಿ ಜೆಡಿಎಸ್ ಕಾನೂನು ಕ್ರಮದಡಿಯಲ್ಲಿ ಈ ಸಮಸ್ಯೆಯನ್ನು ಪರಿಹರಿಸಲಾಗುವುದು. ಆದ್ದರಿಂದ ಈ ಬಾರಿ ಮೂಡಿಗೆರೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಿ.ಬಿ. ನಿಂಗಯ್ಯನವರನ್ನು ಗೆಲ್ಲಿಸಬೇಕೆಂದು ಕಾರ್ಯಕರ್ತರಲ್ಲಿ ಕೇಳಿಕೊಂಡರು.
ಈ ಸಂದರ್ಭದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಕೆಜೆಪಿಯ ಹಲವು ಕಾರ್ಯಕರ್ತರು ಜೆಡಿಎಸ್ಗೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಂಜಪ್ಪಯ್ಯ, ಬಿ.ಎಲ್. ಸಂದೀಪ್, ಆಶಾಲತಾ ಜೈನ್, ಸಂತೋಷ್ ಹಿನಾರಿ, ಜ್ವಾಲನಯ್ಯ, ರಫೀಕ್, ಪ್ರವೀಣ್,ಪ್ರಕಾಶ್, ಇಸಾಕ್, ವರ್ಧಮಾನಯ್ಯ, ಹಿತ್ಲುಮಕ್ಕಿ, ಸುದರ್ಶನ್ ಮುಂತಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

