ಜನರು ಬದಲಾವಣೆ ಬಯಸಿದ್ದಾರೆ: ಟಿಡಿಆರ್
ಶೃಂಗೇರಿ: ರಾಜ್ಯದಲ್ಲಿ ಐದು ವರ್ಷಗಳ ಕಾಲ ಬಿಜೆಪಿಯ ಆಳ್ವಿಕೆಯ ಅವದಿಯಲ್ಲಿ ನಡೆದ ಆಂತರಿಕ ಜಗಳು, ಸ್ವಜನಪಕ್ಷಪಾತ, ಭ್ರಷ್ಟಾಚಾರಗಳಿಂದ ಬೇಸತ್ತು ಜನರು ಬದಲಾವಣೆ ಬಯಸಿದ್ದಾರೆ ಎಂದು ಶೃಂಗೇರಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅಭಿಪ್ರಾಯಪಟ್ಟರು.
ಸೇಮವಾರ ತಾಲೂಕಿನ ತೆಕ್ಕೂರಿನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಪಕ್ಷದಲ್ಲಿ ಕಾರ್ಯಕರ್ತರು ಪರಸ್ಪರ ಒಗ್ಗಟಿನಿಂದ ಕೆಲಸ ಮಾಡುತ್ತಿದ್ದಾರೆ. ಈ ಭಾರಿಯ ಚುನಾವಣೆಯಲ್ಲಿ ಭ್ರಷ್ಟ ಬಿಜೆಪಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಈ ಭಾರಿಯ ಚುನಾವಣೆ ಅಪ ಪ್ರಚಾರ ಹಾಗೂ ಅಭಿವೃದ್ಧಿಯ ನಡುವಿನ ಹೋರಾಟ ಎಂದು ಬಿಂಬಿಸಲಾಗುತ್ತಿದೆ. ಜನರ ಪ್ರತಿನಿಧಿಯಾಗಿ ಕೆಲಸ ಮಾಡುವುದು ಜನಪ್ರತಿನಿದಿಯ ಕರ್ತವ್ಯ. ರಾಜ್ಯದ ಅಭಿವೃದ್ಧಿ ಕಾರ್ಯಗಳಲ್ಲಿ ಕೇಂದ್ರದ ಕೊಡುಗೆ ಸಿಂಹಪಾಲು ಇದೆ. ಕೇಂದ್ರದ ಕೊಡುಗೆಗಳನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿದರು.
ಬಿಜೆಪಿ ದುರಾಡಳಿತದ ಬಗ್ಗೆ ಟೀಕೆ ಮಾಡಲು ಇದು ಸಕಾಲವಲ್ಲ. ಜನತೆ ತಕ್ಕ ಪಾಠ ಕಲಿಸಲಿದ್ದಾರೆ. ಕ್ಷೇತ್ರದ ಮೂಲ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಕೆಪಿಸಿಸಿ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸೌಭಾಗ್ಯ ಗೋಪಾಲ್, ಉಡುಪಿ ಚಿಕ್ಕಮಗಳೂರು ಲೋಕಸಭಾ ಯುವಕಾಂಗ್ರೆಸ್ ಅಧ್ಯಕ್ಷ ನಿಖಿಲ್, ಕಾಂಗ್ರೆಸ್ ಮುಖಂಡ ಬಾಳೆಮನೆ ನಟರಾಜ್, ಕಾನೋಳ್ಳಿ ಕೃಷ್ಣಪ್ಪಗೌಡ, ಸುವರ್ಣ ಅವಿನಾಶ್, ಸುಬ್ಬಣ್ಣ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

