ಚಿಕ್ಕಮಗಳೂರು

ಜೆಡಿಎಸ್ ತೊರೆದು ಕೆಜೆಪಿಗೆ

Published On :

ಕನ್ನಡಪ್ರಭ ವಾರ್ತೆ, ಕಡೂರು, ಏ.22
ಎಲ್ಲ ಸಮುದಾಯ ನೀಡುತ್ತಿರುವ ಬೆಂಬಲದಿಂದ ಕೆಜೆಪಿ ಗೆಲ್ಲಲಿದ್ದು, ಆ ಮೂಲಕ ವಿರೋಧಿಗಳಿಗೆ ತಕ್ಕ ಉತ್ತರ ನೀಡುತ್ತೇನೆ ಎಂದು ಕಡೂರು ವಿಧಾನಸಭಾ ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಬೆಳ್ಳಿ ಪ್ರಕಾಶ್ ಹೇಳಿದರು.
ಪಟ್ಟಣದಲ್ಲಿ ಜೆಡಿಎಸ್ ತೊರೆದು ಕೆಜೆಪಿಗೆ ಸೇರ್ಪಡೆಯಾದ ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡ ನಂತರ ಮಾತನಾಡಿದ ಅವರು, ಇದುವರೆಗೆ ಕ್ಷೇತ್ರದ 250ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿದ್ದು, ತೆಲುಗುಗೌಡ ಸಮುದಾಯವು ಕೆಜೆಪಿ ಬೆಂಬಲಿಸುತ್ತಿದ್ದು ಸಮುದಾಯದ ಗ್ರಾಮ ಪಂಚಾಯ್ತಿ ಸದಸ್ಯರಾದ ರಾಜಣ್ಣ, ಯತೀಶ್, ಈಶ್ವರಪ್ಪ ಸೇರಿದಂತೆ ನೂರಾರು ಕಾರ್ಯಕರ್ತರು ಜೆಡಿಎಸ್ ತೊರೆದು ಕೆಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ಹೇಳಿದರು.
ಸಮುದಾಯದ ಪಂಚೆಹೊಸಳ್ಳಿಯ ಶಿವರುದ್ರಪ್ಪನವರು ತಮ್ಮ ನಾಮಪತ್ರ ವಾಪಸ್ ಪಡೆದು ಕೆಜೆಪಿ ಸೇರಿದ್ದಾರೆ. ಕ್ಷೇತ್ರದಲ್ಲಿ ತಮ್ಮ ವಿರುದ್ಧ ಕೆಲವು ವಿರೋಧಿಗಳು ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರ ಮಾಡುತ್ತಿರುವವರಿಗೆ ಮೇ 8ರ ಫಲಿತಾಂಶ ಸಿಗಲಿದೆ ಎಂದರು.
ಕ್ಷೇತ್ರದ ಎಲ್ಲ ವರ್ಗಗಳ ಮತದಾರರು ಮತ ನೀಡುವ ಮೂಲಕ ನನಗೆ ಆಶೀರ್ವಾದ ಮಾಡಿ ಗೆಲ್ಲಿಸಬೇಕು ಎಂದು ಪ್ರಕಾಶ್ ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಕೆಜೆಪಿ ತಾಲೂಕು ಅಧ್ಯಕ್ಷ ಎಸ್.ವಿ. ಉಮಾಪತಿ, ಮುಖಂಡರಾದ ಎನ್.ಜಿ. ಕೊಪ್ಪಲು ಸಿದ್ದೇಶ್, ರಾಮು, ಎರೇಹಳ್ಳಿ ನರಸಿಂಹಪ್ಪ, ನಾಗರಾಜು, ಗೌಡನಕಟ್ಟೆ ಮಲ್ಲೇಶ್, ಆಲಘಟ್ಟ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.