'ಮಹಿಳೆಯರು ಜಾಗೃತರಾಗಿ'
ಕ.ಪ್ರ. ವಾರ್ತೆ ಚಿಕ್ಕಮಗಳೂರು ಏ.22
ಮಹಿಳೆಯರು ಜಾಗೃತರಾಗಿ ಸಮೃದ್ಧ ದೇಶ ಕಟ್ಟಲು ಹೆಚ್ಚಿನ ಶ್ರಮ ಹಾಕಬೇಕು. ಹಣಕ್ಕಾಗಿ ಮತ ಮಾರಿಕೊಳ್ಳದೆ ತಮ್ಮ ಸಮಸ್ಯೆಗೆ ಸ್ಪಂದಿಸುವ ಜೆಡಿಎಸ್ ಪಕ್ಷವನ್ನು ಬೆಂಬಲಿಸುವಂತೆ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಧರ್ಮೇಗೌಡ ಮನವಿ ಮಾಡಿದ್ದಾರೆ.
ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಬಿಜೆಪಿ, ಕೆಜೆಪಿ, ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಯುವಕರು ಪಕ್ಷಕ್ಕೆ ಬರುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯ ಎಂದರು.
ರಾಜ್ಯ ಯುವ ಕಾರ್ಯಾಧ್ಯಕ್ಷ ಸಿ.ಎನ್. ಅಕ್ಮಲ್ ಮಾತನಾಡಿ, ದೇವರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಪಕ್ಷ ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ಸ್ವ ಅಭಿವೃದ್ಧಿಯಲ್ಲಿ ತೊಡಗಿದೆ. ಸ್ಥಳೀಯ ಶಾಸಕರು ಕಳಪೆ ಕಾಮಗಾರಿ ಮಾಡಿದ್ದರೂ ಯಾವುದೇ ಅಧಿಕಾರಿಗಳು ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಂಡಿಲ್ಲ. 800 ಕೋಟಿ ರು. ಅನುದಾನ ತಂದಿದ್ದು, ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿಯನ್ನಾಗಿ ಮಾಡಬಹುದಿತ್ತು ಎಂದರು.
ಜೆಡಿಎಸ್ ಮುಖಂಡ ಅನಿಲ್ ಕುಮಾರ್, ಮಹಿಳಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷೆ ಫಾತಿಮಾ, ನಗರ ಅಧ್ಯಕ್ಷೆ ರುಕ್ಸಾನಾ ಬಾನು, ನಾಗೇರಾಜ್ ಅರಸ್, ದೇವರಾಜ್ಅರಸ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

