ಚಿಕ್ಕಮಗಳೂರು

ಇಂದು ಮಾಂಸ ಮಾರಾಟ ನಿಷೇಧ

Published On :

ಶಿವಮೊಗ್ಗ: 23ರಂದು ಮಹಾವೀರ ಜಯಂತಿ ಅಂಗವಾಗಿ ಪ್ರಾಣಿ ಹಿಂಸೆ ನಿಷೇಧಿಸಲಾಗಿದೆ. ಶಿವಮೊಗ್ಗ ನಗರಸಭಾ ವ್ಯಾಪ್ತಿಯ ಎಲ್ಲಾ ಬಗೆಯ ಮಾಂಸ ಮಾರಾಟಗಾರರು ತಮ್ಮ ಕಸಾಯಿ ಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಮಾಂಸ ಮಾರಾಟಗಾರರು 23ಕ್ಕೆ ತಮ್ಮ ಅಂಗಡಿಗಳನ್ನು ಮುಚ್ಚಿ ಮಾರಾಟ ನಿಲ್ಲಿಸಬೇಕು. ಒಂದು ವೇಳೆ ಆದೇಶವನ್ನು ಉಲ್ಲಂಘಿಸಿದರೆ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಪ್ರವೇಶ ಪರೀಕ್ಷೆ: ನಿಷೇದಾಜ್ಞೆ ಜಾರಿ
ಶಿವಮೊಗ್ಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಂಜಿನಿಯರಿಂಗ್, ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ರಾಜ್ಯಾದ್ಯಂತ ನಡೆಸಲು ತೀರ್ಮಾನಿಸಿದ್ದು, ಮೇ-1 ಮತ್ತು 2ರಂದು ಜಿಲ್ಲೆಯ 9 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.
 ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆಯುವ ದಿನದಂದು ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಆದೇಶ ಹೊರಡಿಸಿರುತ್ತಾರೆ.
 ಈ ಅವಧಿಯಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರ ಪ್ರವೇಶಿಸಬಾರದು.
ಐದು ಮತ್ತು ಐದಕ್ಕಿಂತ ಹೆಚ್ಚು ಜನರು ನಿಷೇಧಿತ ವ್ಯಾಪ್ತಿಯ ಪ್ರದೇಶದಲ್ಲಿ ಸೇರುವುದಾಗಲಿ, ಯಾವುದೇ ಘೋಷಣೆಗಳನ್ನು ಕೂಗುವುದಾಗಲಿ, ಸುತ್ತಮುತ್ತಲಿನಲ್ಲಿರುವ ಟೈಪಿಂಗ್, ಜೆರಾಕ್ಸ್, ಫ್ಯಾಕ್ಸ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ತೆರೆಯುವುದಾಗಲಿ ಹಾಗೂ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿಪುಲ್ ಬನ್ಸಾಲ್ ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.