ಚಿಕ್ಕಮಗಳೂರು

ಮಹಿಳೆ ಅನುಮಾನಾಸ್ಪದ ಸಾವು

Published On :

ಕೊಪ್ಪ: ತಾಲೂಕಿನ ಶಾನುವಳ್ಳಿ ದಸನಗದ್ದೆಯ ಕಾಲೋನಿಯಲ್ಲಿ  ಮಹಿಳೆಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಗಂಗಮ್ಮ (55) ಮೃತ ಮಹಿಳೆ. ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷದವರು ನೀಡಿದ ಮದ್ಯ ಸೇವಿಸಿ ಮೃತಪಟ್ಟಿದ್ದಾಳೆ ಎಂದು ಹರಿಹರಪುರ ಪೊಲೀಸ್ ಠಾಣೆಗೆ ಅವರ ಪತಿ ಮಂಜಯ್ಯ ದೂರು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಡಿವೈಎಸ್ಪಿ ಡಾ. ಜಗದೀಶ್ ಮತ್ತು ಪೊಲೀಸ್ ಅಧಿಕಾರಿಗಳು ಹಾಗೂ ನೀತಿ ಸಂಹಿತೆ ಉಲ್ಲಂಘನಾ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆ ಅನಾರೋಗ್ಯದಿಂದ ಬಳಲುತ್ತಿದ್ದರು ಎಂಬುದಾಗಿ ತಿಳಿದು ಬಂದಿದ್ದು, ಮೃತರ ಮನೆಯಲ್ಲಿದ್ದ 9 ಲಿಕ್ಕರ್ ಪೌಂಚ್ಗಳನ್ನು ವಶಪಡಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ವಶಪಡಿಸಿಕೊಂಡ ಲಿಕ್ಕರ್ ಪೌಂಚ್ಗಳ ಮೇಲೆ ಮುದ್ರೆ ಹಾಗೂ ನಂಬರ್ಗಳನ್ನು ಅಬಕಾರಿ ಇಲಾಖೆಯ ಅಧಿಕಾರಿ ಪ್ರದೀಪ್ ಪರೀಶೀಲಿಸಿ ಇದು ಕೆಎಸ್ಬಿಸಿಎಲ್ನದ್ದು ಎಂದು ಖಚಿತ ಪಡಿಸಿದ್ದಾರೆ.  
ಮೃತ ದೇಹವನ್ನು ಮರಣೋತ್ತಾರ ಪರೀಕ್ಷೆಗೆ ಶಿವಮೊಗ್ಗಕ್ಕೆ ಕಳುಹಿಸಲಾಗಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್ಪಿ ಡಾ. ಜಗದೀಶ್ ತಿಳಿಸಿದ್ದಾರೆ.   


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.