ರಾಜ್ಯಮಟ್ಟದ ಕಬಡ್ಡಿ: ಮಂಡ್ಯ ಪ್ರಥಮ
ಕ.ಪ್ರ. ವಾರ್ತೆ ಚಿಕ್ಕಮಗಳೂರು ಏ.22
ದಂತ ಯುವ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ನಗರದ ಎಐಟಿ ಕಾಲೇಜಿನ ಬಿಜಿಎಸ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ ಮಂಡ್ಯದ ಎರಡು ತಂಡಗಳು ಪ್ರಥಮ ಹಾಗೂ ದ್ವಿತೀಯ ಬಹುಮಾನಗಳನ್ನು ಪಡೆದುಕೊಂಡಿವೆ.
ಮಂಡ್ಯದ ಎ ತಂಡ ಪ್ರಥಮ, ಬಿ ತಂಡ ದ್ವಿತೀಯ, ದಾವಣಗೆರೆಯ ಸೃಷ್ಟಿ ತಂಡ ತೃತೀಯ ಹಾಗೂ ತಾಲೂಕಿನ ಮತ್ತಾವರದ ಚೌಡೇಶ್ವರಿ ಯುವಕ ತಂಡ ನಾಲ್ಕನೇ ಸ್ಥಾನ ಪಡೆದವು.
ಪಂದ್ಯಾವಳಿಯ ನಂತರ ರಾತ್ರಿ ನಡೆದ ಸಮಾರಂಭದಲ್ಲಿ ಎಐಟಿ ಪ್ರಾಂಶುಪಾಲ ಡಾ.ಸಿ.ಕೆ. ಸುಬ್ರಾಯ ಅವರು ವಿಜೇತರಿಗೆ ಬಹುಮಾನಗಳನ್ನು ವಿತರಿಸಿ ಮಾತನಾಡಿ, ಸದೃಢ ದೇಹ ಮತ್ತು ಆರೋಗ್ಯಕ್ಕಾಗಿ ಯುವ ಜನತೆ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಸಲಹೆ ಮಾಡಿದರು.
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ಲಭಿಸುವುದರ ಜೊತೆಗೆ ದೇಹ ಸದೃಢವಾಗುತ್ತದೆ. ಮನಸ್ಸು ಸದಾ ಕಾಲ ಉಲ್ಲಸಿತವಾಗಿರುತ್ತದೆ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ದಂತ ಯುವ ಅಭಿವೃದ್ಧಿ ಸಂಘದ ಕಾರ್ಯದರ್ಶಿ ಎಸ್. ಪ್ರಶಾಂತ್, ಜನಮಾನಸದಿಂದ ಮರೆಯಾಗುತ್ತಿರುವ ದೇಶೀಯ ಕ್ರೀಡೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ಕಬಡ್ಡಿ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದ್ದು ಮುಂದಿನ ವರ್ಷಗಳಲ್ಲಿ ಗ್ರಾಮೀಣ ಭಾಗದ ಉಳಿದ ಕ್ರೀಡೆಗಳಿಗೂ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಬೆಳಗಿನಿಂದ ರಾತ್ರಿಯವರೆಗೆ ನಡೆದ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 15 ತಂಡಗಳು ಭಾಗವಹಿಸಿದ್ದವು. ರಾಮಲಿಂಗಾಚಾರ್, ಕೋಟೆ ಶಂಕರ್, ವಿಶ್ವನಾಥ್, ಪ್ರಕಾಶ್ ಮತ್ತು ರಮೇಶ್ ಅವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು. ನಿವೃತ್ತ ಶಿಕ್ಷಕ ತಿಮ್ಮೇಗೌಡ, ದಂತ ಯುವ ಅಭಿವೃದ್ಧಿ ಸಂಘದ ಕಾರ್ಯದರ್ಶಿಗಳಾದ ಚೇತನ್, ಮೋಹನ್, ಆದಿತ್ಯ, ಭರತ್, ಯಶಸ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

