ದಲಿತರನ್ನು ನಿರ್ಲಕ್ಷಿಸಿದ ಕಾಂಗ್ರೆಸ್: ಆರೋಪ
ಕ.ಪ್ರ.ವಾರ್ತೆ, ಕಡೂರು, ಏ.23
ಅರವತ್ತು ವರ್ಷಕ್ಕೂ ಹೆಚ್ಚು ಕಾಲ ಈ ದೇಶದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ದಲಿತರು ಹಾಗೂ ಹಿಂದುಳಿದವರನ್ನು ಕೇವಲ ಮತ ಬ್ಯಾಂಕಾಗಿ ಬಳಸಿಕೊಂಡು ಅಭಿವೃದ್ಧಿ ಮಾಡಲಿಲ್ಲ ಎಂದು ತಾಲೂಕು ಬಿಜೆಪಿ ಪರಿಶಿಷ್ಟ ಜಾತಿ ಮತ್ತು ವರ್ಗದ ಮೋರ್ಚಾ ಅಧ್ಯಕ್ಷ ಮತ್ತು ತಾಲೂಕು ಪಂಚಾಯ್ತಿ ಸದಸ್ಯ ಆರ್. ಶಿವಕುಮಾರ್ ಆರೋಪಿಸಿದರು.
ಅವರು ಕಡೂರು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ತಾಲೂಕು ಬಿಜೆಪಿ ಎಸ್ಸಿ ಎಸ್ಟಿ ಮೋರ್ಚಾ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಹಲವು ದಶಕಗಳ ಕಾಲ ದೇಶದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಮುಖಂಡರು ಪರಿಶಿಷ್ಟ ಜಾತಿ ಮತ್ತು ವರ್ಗವನ್ನು ಕೇವಲ ಮತ ಬ್ಯಾಂಕುಗಳನ್ನಾಗಿ ಮಾಡಿಕೊಂಡರು. ಆದರೆ, ಬಿಜೆಪಿ ಸರ್ಕಾರ ದಲಿತರು ಮತ್ತು ಶೋಷಿತರಿಗೆ ರಾಜಕೀಯ ಪ್ರಾತಿನಿಧ್ಯತೆ ನೀಡಿ ಕಾಲೋನಿಗಳಿಗೆ ಸಮುದಾಯಭವನಗಳು, ಅಂಬೇಡ್ಕರ್ ಭವನಗಳ ನಿರ್ಮಾಣ ಮಾಡಿ ಶಿಕ್ಷಣಕ್ಕೆ ಹೆಚ್ಚಿನ ಅದ್ಯತೆ ನೀಡಿದರು ಎಂದರು.
ಸಾಮಾಜಿಕ ನ್ಯಾಯ: ಲಂಬಾಣಿ, ಭೋವಿ ಸಮುದಾಯ ಸೇರಿದಂತೆ ವಿವಿಧ ಪರಿಶಿಷ್ಟ ಸಮುದಾಯಗಳನ್ನು ಗುರುತಿಸುವ ಮೂಲಕ ರಾಜಕೀಯ, ಶೈಕ್ಷಣಿಕ ಮತ್ತು ಸಾಮಾಜಿಕ ನ್ಯಾಯ ಕೊಡಿಸುವಲ್ಲಿ ಬಿಜೆಪಿ ಸರ್ಕಾರವು ಶ್ರಮಿಸಿ ಗುರುತಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಬೀರೂರು ದೇವರಾಜುರವರಿಗೆ ಎಲ್ಲ ಪರಿಶಿಷ್ಟ ವರ್ಗಗಳು ಮತ್ತು ಪಂಗಡಗಳ ಮತದಾರರು ಮತ ನೀಡುವ ಮೂಲಕ ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಎಸ್ಸಿ, ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಲಕ್ಷ್ಮಣ ನಾಯ್ಕ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪರಿಶಿಷ್ಟ ವರ್ಗಗಳನ್ನು ಗುರುತಿಸಿ ಪರಿಶಿಷ್ಯ ವರ್ಗ ಮತ್ತು ದಲಿತರ ಕಲ್ಯಾಣಕ್ಕಾಗಿ ಬಿಜೆಪಿ ಸರ್ಕಾರವು ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಿತು. ಪರಿಶಿಷ್ಟ ಮಹಿಳೆಯರಿಗೆ ಭೂಮಿ ಖರೀದಿಸಲು 2.50 ಲಕ್ಷ ಸಹಾಯಧನ ನೀಡಿ ಎಲ್ಲ ದಲಿತ ಸಮುದಾಯಗಳನ್ನು ಗುರುತಿಸಿದ ಏಕೈಕ ಸರ್ಕಾರ ಬಿಜೆಪಿಯಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಿಜೆಪಿಗೆ ಬರ ಮಾಡಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಪ್ರಭಾಕರ್, ಶ್ರೀಕಾಂತ್, ಮಂಜುನಾಥ್, ಸತೀಶ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

