ಬಿಎಸ್ಆರ್ ಕಾಂಗ್ರೆಸ್ ಬೆಂಬಲಿಸಲು ಮನವಿ
ಕ.ಪ್ರ.ವಾರ್ತೆ ಟಿ ಚಿಕ್ಕಮಗಳೂರು ಟಿ ಏ.23
ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷದ ಭ್ರಷ್ಟಾಚಾರದಿಂದ ಬೇಸತ್ತಿರುವ ಜನತೆ ಬದಲಾವಣೆಯನ್ನು ಬಯಸಿದ್ದು, ಬಡವರ, ಶ್ರಮಿಕರ, ರೈತರ ಪರವಾದ ಬಿಎಸ್ಆರ್ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಗೆಲ್ಲಿಸುವ ಮೂಲಕ ಶ್ರೀರಾಮುಲು ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಿದ್ದಾರೆ ಎಂದು ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಅನಿಲ್ ಆನಂದ್ ಹೇಳಿದ್ದಾರೆ.
ಬಿಎಸ್ಆರ್ ಪಕ್ಷವನ್ನು ಜಿಲ್ಲೆಯಲ್ಲಿ ಹೊಸದಾಗಿ ಪುನರ್ ರಚನೆ ಮಾಡಲಾಗಿದ್ದು, ತಮ್ಮನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇಲ್ಲಿಯ ತನಕ ಜಿಲ್ಲೆಯಲ್ಲಿ ದುಡಿದ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ ಅವರು, ಆಮಿಷಗಳಿಗೆ ಕೆಲವು ಮಂದಿ ಪಕ್ಷವನ್ನು ತೊರೆದು ಹೋಗಿದ್ದಾರೆ ಎಂದರು.
ರಾಷ್ಟ್ರೀಯ ಪಕ್ಷಗಳ ವರ್ತನೆಯಿಂದ ಜನತೆ ರೋಸಿ ಹೋಗಿದ್ದಾರೆ, ಶ್ರೀರಾಮಲು ಅವರ ಪಕ್ಷದ ಬಗ್ಗೆ ಜನತೆ ಹೆಚ್ಚಿನ ಆಸಕ್ತಿ ತೊರುತ್ತಿದ್ದಾರೆಂದು ಹೇಳಿದ ಅವರು, ಜಿಲ್ಲೆಯ ತರೀಕೆರೆ, ಶೃಂಗೇರಿ ಮತ್ತು ಕಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು ಅವರ ಗೆಲುವಿಗೆ ಶ್ರಮಿಸಲಾಗುವುದು ಎಂದು ಹೇಳಿದರು.
ಕಡೂರು ಕ್ಷೇತ್ರದಲ್ಲಿ ಕೆ.ಎಂ. ಕೆಂಪರಾಜು, ತರೀಕೆರೆಯಲ್ಲಿ ಮಂಜುನಾಥ್ ಮತ್ತು ಶೃಂಗೇರಿಯಲ್ಲಿ ಪೂರ್ಣೇಶ್ ಕಣಕ್ಕಿಳಿದಿದ್ದಾರೆ. ಚಿಕ್ಕಮಗಳೂರು ಮತ್ತು ಮೂಡಿಗೆರೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಗೊಂದಲ ಹಾಗೂ ತಪ್ಪಿನಿಂದ ಸ್ಪರ್ಧಿಸಲು ಸಾಧ್ಯವಾಗಲಿಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ಪ್ರದೀಪ್, ನಂದೀಶ್, ವಿಶ್ವನಾಥ್, ನಾಗರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

