ಮತದಾನ ಜಾಗೃತಿ ಅಗತ್ಯ: ಕಾಂತ್ರಾಜ್
ಮೂಡಿಗೆರೆ: ಹಿಂದೆ ನಡೆದ ಚುನಾವಣೆಗಳಲ್ಲಿ ಮತದಾನವು ಶೇಕಡವಾರು ಕಡಿಮೆಯಾಗಿರುವ ಉದ್ದೇಶದಿಂದ ಭಾರತ ಚುನಾವಣೆ ಆಯೋಗವು ಪ್ರತಿಯೊಬ್ಬ ಮತದಾರನೂ ಮತ ಚಲಾವಣೆ ಮಾಡುವಂತೆ ಜಾಗೃತಿ ಮೂಡಿಸಬೇಕೆಂದು ಆದೇಶಿಸಿದ್ದು, ಅದರಂತೆ ಸಮಿತಿಯಲ್ಲಿರುವ ಸದಸ್ಯರು ಸಂಪೂರ್ಣ ಶ್ರಮ ವಹಿಸಿ ಕೆಲಸ ಮಾಡಬೇಕೆಂದು ಡಿಡಿಪಿಐ ಕಾಂತ್ರಾಜ್ ತಿಳಿಸಿದರು.
ತಾ.ಪಂ. ಸಭಾಂಗಣದಲ್ಲಿ ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತ ವತಿಯಿಂದ ಮತದಾರರಲ್ಲಿ ಜಾಗೃತಿ ಮೂಡಿಸುವ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿಂದೆ ನಡೆದ ಚುನಾವಣೆಗಳಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಚುನಾವಣಾ ಆಯೋಗ ನಡಸುತ್ತಿರಲಿಲ್ಲ. ಬದಲಾಗಿ ರಾಜಕೀಯ ಪಕ್ಷಗಳು ಮತದಾರರ ಬಳಿ ಹೋಗಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿತ್ತು ಎಂದರು.
ಜಾಗೃತಿ ಅಗತ್ಯ: ವರ್ಷದಿಂದ ವರ್ಷಕ್ಕೆ ಮತದಾನವು ಶೇಕಡಾವಾರು ಕಡಿಮೆಯಾಗುತ್ತಾ ಇರುವುದರಿಂದ ಮತದಾರರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಮಟ್ಟದಲ್ಲಿ ಸಮಿತಿ ರಚನೆ ಮಾಡಲು ಕೇಂದ್ರ ಚುನಾವಣಾ ಆಯೋಗದಿಂದ ರಾಜ್ಯಕ್ಕೆ ಬಂದಿತು. ರಾಜ್ಯ ಚುನಾವಣಾ ಆಯೋಗವು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೇತೃತ್ವದಲ್ಲಿ ಸಮಿತಿಗಳನ್ನು ರಚನೆ ಮಾಡಲಾಯಿತು. ಅದರಲ್ಲಿ ಹೆಚ್ಚಾಗಿ ನೌಕರರಿರುವ ಇಲಾಖೆಗಳ ಅಧಿಕಾರಿಗಳನ್ನು ಸದಸ್ಯರನ್ನಾಗಿ ಮಾಡಿ ಸಮಿತಿ ರಚನೆ ಮಾಡಿದೆ ಎಂದರು.
ಶ್ರಮ ವಹಿಸಿ: ಮೇ 5ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಮತದಾನದಲ್ಲಿ ಭಾಗವಹಿಸಿ ತಮ್ಮ ಹಕ್ಕನ್ನು ಚಲಾಯಿಸಿ ದೇಶಾಭಿಮಾವನ್ನು ಎತ್ತಿ ಹಿಡಿಯಲು ಪ್ರತಿಯೊಬ್ಬರೂ ಶ್ರಮ ವಹಿಸಬೇಕು. ಅದಕ್ಕಾಗಿ ಮೂಡಿಗೆರೆ ಪಟ್ಟಣ ವ್ಯಾಪ್ತಿಯಲ್ಲಿ 11 ವಾರ್ಡ್ಗಳಿವೆ. ಅದರಲ್ಲಿ 11ನೇ ವಾರ್ಡ್ ಅತಿ ದೊಡ್ಡದಾಗಿರುವುದರಿಂದ ಇಲ್ಲಿಗೆ 2 ತಂಡಗಳನ್ನು ರಚನೆ ಮಾಡಬೇಕೆಂದು ಸಲಹೆ ನೀಡಿದರು.
ಬಳಿಕ ಪಟ್ಟಣದ ಪ್ರತಿ ವಾರ್ಡ್ನಲ್ಲಿರುವ ಮತದಾರರಿಗೆ ಜಾಗೃತಿ ಮೂಡಿಸಲು ವಿವಿಧ ಇಲಾಖೆಗಳ ನೌಕರರ ಪಡೆ ನಿರ್ಮಿಸಿ ಒಟ್ಟು 12 ತಂಡಗಳ ರಚನೆ ಮಾಡಲಾಯಿತು. ಜಾಗೃತಿ ಮೂಡಿಸಲು ಚುನಾವಣಾ ಆಯೋಗದ ಕರ ಪತ್ರಗಳನ್ನು 12 ತಂಡಗಳಿಗೆ ವಿತರಿಸಲಾಯಿತು.
ಸಭೆಯಲ್ಲಿ ತಾ.ಪಂ.ಮುಖ್ಯ ಕಾರ್ಯ ನಿರ್ವಹಾಣಾಧಿಕಾರಿ ಚನ್ನಬಸಪ್ಪ ಮೇಕಾಲೆ, ಸಮಾಜ ಕಲ್ಯಾಣಾಧಿಕಾರಿ ಹರ್ಷಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಕುಮಾರಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

