ಚಿಕ್ಕಮಗಳೂರು

ಬಿಜೆಪಿ ತ್ಯಜಿಸಲು ನಿರ್ಧಾರ'

Published On :

ಕ.ಪ್ರ.ವಾರ್ತೆ ಟಿ ಚಿಕ್ಕಮಗಳೂರು ಟಿ  ಏ.23
ಸಿರಿಗೆರೆಯ ಶ್ರೀತರಳಬಾಳು ಮಠಾಧೀಶರ ಎದುರು ಪ್ರಮಾಣ ಮಾಡಿ, ಈಗ ಮಾತಿಗೆ ತಪ್ಪಿ ವಚನ ಭ್ರಷ್ಟರಾಗಿರುವ ಸಚಿವ ಸಿ.ಟಿ. ರವಿ ಅವರ ಧೋರಣೆಯನ್ನು ವಿರೋಧಿಸಿ ಬಿಜೆಪಿಯನ್ನು ತ್ಯಜಿಸಲು ನಿರ್ಧಾರಿಸಿದ್ದೇವೆ ಎಂದು ಬಿಜೆಪಿ ನಗರ ಯುವ ಮೋರ್ಚಾ ಕಾರ್ಯದರ್ಶಿ ಕೇಶವಮೂರ್ತಿ ಹೇಳಿದ್ದಾರೆ.
ತಾವು ಬಿಜೆಪಿ ಪಕ್ಷದಲ್ಲಿ ಕಳೆದ 8 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಯಾವುದೇ ರೀತಿಯ ಸ್ಥಾನಮಾನ ದೊರೆಯುತ್ತಿಲ್ಲ. ಇತರೆ ಪಕ್ಷದಿಂದ ಬಂದಂತ ವ್ಯಕ್ತಿಗಳಿಗೆ ಮಣೆ ಹಾಕಲಾಗುತ್ತಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಕ್ಷೇತ್ರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದಿಂದ ಜನ ಬೇಸತ್ತಿದ್ದಾರೆ. ಇದರಿಂದಾಗಿ ಬದಲಾವಣೆ ಬಯಸಿದ್ದಾರೆ. ಬಿಜೆಪಿ ಪಕ್ಷವು ಹಲವು ಕಾರಣಗಳಿಂದ ಅವಸಾನದ ಹಂಚಿಗೆ ತಲುಪಿದೆ ಎಂದು ಟೀಕಿಸಿದರು.
ಅಭಿವೃದ್ಧಿಯ ಹೆಸರಿನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ಸಖರಾಯಪಟ್ಟಣ ಮತ್ತು ದೇವನೂರು ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತಾಂಡವವಾಡುತ್ತಿದೆ ಎಂದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.