ರೆಸಾರ್ಟ್ ರಾಜಕೀಯ ಮಾಡಿದ್ದೇ ಬಿಜೆಪಿ
ಕ.ಪ್ರ.ವಾರ್ತೆ ಟಿ ನರಸಿಂಹರಾಜಪುರ ಟಿ ಏ.23
ಬಿಜೆಪಿ ಸರ್ಕಾರದಲ್ಲಿ ಎಷ್ಟು ಜನ ಸಚಿವರು ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಬಿಜೆಪಿಯವರೇ ಲೆಕ್ಕ ಹಾಕಲಿ ಎಂದು ಮಾಜಿ ಸಚಿವೆ ಮೋಟಮ್ಮ ಲೇವಡಿ ಮಾಡಿದರು.
ಮಂಗಳವಾರ ಬಿ.ಎಚ್. ಕೈಮರದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿ, ಬಿಜೆಪಿ ಕಳೆದ 5 ವರ್ಷಗಳಲ್ಲಿ ಕುರ್ಚಿಯಾಟ ನಡೆಸಿದರು. ಅಧಿಕಾರಕ್ಕಾಗಿ ರೆಸಾರ್ಟ್ ರಾಜಕೀಯ ಪ್ರಾರಂಭ ಮಾಡಿದ್ದೇ ಬಿಜೆಪಿ ಸರ್ಕಾರದ ಶಾಸಕರು.
ಕೇವಲ 5 ವರ್ಷದ ಆಡಳಿತ ಮಾಡಿದ ಬಿಜೆಪಿ ಭ್ರಷ್ಟಾಚಾರದಲ್ಲಿ ನಂ 1 ಸ್ಥಾನಕ್ಕೆ ಬಂದಿತು ಆರೋಪಿಸಿದರು. ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಶಾಂತ ಸ್ವಭಾವದ ರಾಜಕಾರಣಿಯಾಗಿದ್ದಾರೆ. ಅವರಿಗೆ ನಿಮ್ಮ ಮತ ನೀಡುವಂತೆ ಮತದಾರರಿಗೆ ಮನವಿ ಮಾಡಿದರು.
ಗುತ್ತಿಗೆದಾರರಿಗಾಗಿ ಕಾಮಗಾರಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಜಯಪ್ರಕಾಶ ಹೆಗಡೆ ಮಾತನಾಡಿ, ಶೃಂಗೇರಿ ಕ್ಷೇತ್ರದಲ್ಲಿ ಪ್ರವಾಸ ಮಾಡಿದಾಗ ಗುತ್ತಿಗೆದಾರರಿಗಾಗಿ ಕಾಮಗಾರಿ ಮಾಡಲಾಗುತ್ತದೆ ಎಂಬ ಭಾವನೆ ಬರುತ್ತಿದೆ. ಮುಖ್ಯ ರಸ್ತೆ ಬಗ್ಗೆ ಮಾತ್ರ ಗಮನ ಕೇಂದ್ರೀಕರಿಸಲಾಗಿದ್ದು ಗ್ರಾಮೀಣ ಭಾಗದಲ್ಲಿ ರಸ್ತೆ ಹದಗೆಟ್ಟಿದೆ. ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ.
ಸವಾಲು: ನನ್ನ ಲೋಕ ಸಭಾ ಅನುದಾನದಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು. ಈ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು. ಲೋಕ ಸಭಾ ಸದಸ್ಯ ಜಯಪ್ರಕಾಶ ಹೆಗಡೆ ಏನು ಕೆಲಸ ಮಾಡಿದ್ದಾರೆ ಎಂದು ಉಸ್ತುವಾರಿ ಸಚಿವರು ಪ್ರಶ್ನೆ ಮಾಡುತ್ತಿದ್ದಾರೆ. ನನ್ನ ಬಗ್ಗೆ ಕೇಳುವ ಅವರು ಹಿಂದಿನ ಲೋಕ ಸಭಾ ಸದಸ್ಯರು ಏನು ಕೆಲಸ ಮಾಡಿದ್ದರು ಎಂದು ಮೊದಲು ಪಟ್ಟಿ ನೀಡಲಿ ಎಂದು ಸವಾಲು ಹಾಕಿದರು.
ಗೋರಖ್ ಸಿಂಗ್ ಸಮಿತಿ: ರಾಜ್ಯದ ಹಲವು ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರವೆ ಅನುದಾನ ನೀಡುತ್ತಿದೆ. ಆದರೆ ರಾಜ್ಯ ಸರ್ಕಾರ ಇದರ ಬಗ್ಗೆ ಹೇಳದೆ ರಾಜ್ಯ ಸರ್ಕಾರದ ಕಾರ್ಯಕ್ರಮ ಎಂದು ಬಿಂಬಿಸುತ್ತದೆ.
ಅಡಕೆ ಹಳದಿ ಎಲೆ ರೋಗದ ಸಮಸ್ಯೆ ಬಗ್ಗೆ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರವೆ ಡಾ. ಗೋರಖ್ ಸಿಂಗ್ ಸಮಿತಿ ಜಾರಿಗೆ ತಂದಿತು. ವರದಿಯ 9 ಅಂಶಗಳ ಬಗ್ಗೆ ಈಗಾಗಲೇ ಜಾರಿಗೆ ತರಲಾಗಿದೆ. ಉಳಿದ ಸಾಲ ಮನ್ನಾ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ.
ಅಡಕೆ ಬೆಳೆಗಾರರ ಬಗ್ಗೆ ಖಾಳಜಿ ಇದ್ದರೆ ಬಜೆಟ್ನಲ್ಲಿ ಕನಿಷ್ಠ 100 ಕೋಟಿ ರುಪಾಯಿ ಅಡಕೆ ಹಳದಿ ಎಲೆ ರೋಗದ ಸಂತ್ರಸ್ತರಿಗೆ ಪ್ಯಾಕೇಜ್ ನೀಡಬಹುದಿತ್ತು. ಏಕೆ ಮಾಡಲಿಲ್ಲ ಎಂದು ಅವರು ಪ್ರಶ್ನೆ ಮಾಡಿದರು.
ಡಾ.ಕೆ.ಪಿ. ಅಂಶುಮಂತ್ ಅಧ್ಯಕ್ಷತೆ ವಹಿಸಿದ್ದರು. ಮುಖಂಡ ಪ್ರಸನ್ನ, ಎಐಸಿಸಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಸಿ. ಗೀತ, ಟಿ.ವಿ. ರಾಜು, ಆರ್. ಸದಾಶಿವ, ಕೆ.ಎಂ. ಗಂಗಾಧರ್, ಆದಿಲ್, ವನಮಾಲಮ್ಮ, ಲೇಖಾ ವಸಂತ್, ನವೀನ್, ಶೇವಿಯಾರ್, ಇ.ಸಿ. ಜೋಯಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

