ನಾಳೆ ಬಿಎಸ್ಆರ್ ಕಾಂಗ್ರೆಸ್ ಪ್ರಚಾರ (ಸುದ್ದಿ ಸಂಕ್ಷೇಪ)
ತರೀಕೆರೆ: ಬಿಎಸ್ಆರ್ ಕಾಂಗ್ರೆಸ್ ಪಕ್ಷದಿಂದ 26ರಂದು ಬೆಳಿಗ್ಗೆ 7 ಗಂಟೆಗೆ ಲಕ್ಕವಳ್ಳಿ ಮಾರಿಕಾಂಬ ದೇವಸ್ಥಾನದಿಂದ ತರೀಕೆರೆ ಸಾಲುಮರದಮ್ಮನವರ
ದೇವಸ್ಥಾನದ ವರೆಗೆ ಪಾದಯಾತ್ರೆ ಮೂಲಕ ಮತಯಾಚನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರದ ಬಿಎಸ್ಆರ್ ಪಕ್ಷದ ಅಭ್ಯರ್ಥಿ ಕೆ. ಮಂಜುನಾಥ ತಿಳಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಲಕ್ಕವಳ್ಳಿ ಮಾರಿಕಾಂಬ ದೇವಸ್ಥಾನದಿಂದ ಹಳೇ ಲಕ್ಕವಳ್ಳಿ, ಕೆಂಚಿಕೊಪ್ಪಲು, ಹೆಸರುಗೊಪ್ಪ, ಹಲಸೂರು, ರಂಗೇನಹಳ್ಳಿ, ಮುಡುಗೋಡು, ಸಾಲುಮರದಮ್ಮ ದೇವಸ್ಥಾನದ ವರೆಗೆ ಪಾದಯಾತ್ರೆ ಮೂಲಕ ಮತಯಾಚನೆ ನೆಡೆಸಲಾಗುವುದು ಎಂದು ಅವರು ತಿಳಸಿದ್ದಾರೆ. ಬಾಲರಾಜ್, ಅನಿಲ್ ಆನಂದ್, ಗಿರೀಶ್, ಕೃಷ್ಣಮೂರ್ತಿ, ನಂದೀಶ್, ಪ್ರದೀಪ್, ಮಹೇಂದ್ರಸ್ವಾಮಿ, ಅಣ್ಣಾವೇಲು, ಗೋವಿಂದಪ್ಪ, ರಮೇಶ್, ಕೃಷ್ಣಪ್ಪ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಕಾವೇರುತ್ತಿರುವ ಪ್ರಚಾರ
ಶೃಂಗೇರಿ: ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಶೃಂಗೇರಿಯಲ್ಲಿ ಚುನಾವಣಾ ಕಾವು ಏರತೊಡಗಿದೆ. ಈಗಾಗಲೇ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು ಗ್ರಾಮೀಣ ಪ್ರದೇಶಗಳಲ್ಲಿ ಮತಯಾಚನೆ ನಡೆಸಿದ್ದಾರೆ. ಪಕ್ಷಗಳ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತದಾರನ ಮನವೊಲಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ರಾಜ್ಯ, ರಾಷ್ಟ್ರಮಟ್ಟದ ನಾಯಕರು ಈವರೆಗೆ ಇತ್ತ ಸುಳಿದಿಲ್ಲ. ಗ್ರಾಮೀಣ ಭಾಗಗಳಲ್ಲಿ ಚುನಾವಣೆಯ ಭರಾಟೆ ಜೋರಾಗುತ್ತಿದ್ದರೆ, ಪಟ್ಟಣದಲ್ಲಿ ಅಬ್ಬರವಿಲ್ಲ. ಚುನಾವಣೆ ವೀಕ್ಷಕರು ಹದ್ದಿನ ಕಣ್ಣಿಟ್ಟಿದ್ದರೂ ಈವರೆಗೆ ಹಣ, ಮದ್ಯ, ಸೀರೆ ಇತ್ತಾದಿ ವಸ್ತುಗಳನ್ನು ಹಂಚುವ ಪ್ರಕರಣಗಳು ದಾಖಲಾಗಿಲ್ಲ. ಕಾಂಗ್ರೆಸ್, ಬಿಜೆಪಿ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದರೆ ಜೆಡಿಎಸ್, ಬಿಆರ್ಎಸ್ ಮಂದಗತಿಯಲ್ಲಿ ಸಾಗಿದೆ. ಬಿಎಸ್ಪಿ, ಕೆಜೆಪಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿಲ್ಲ.
ಈಶ್ವರಪ್ಪಗೆ ಷರತ್ತು ಬದ್ಧ ಜಾಮೀನು
ಶಿವಮೊಗ್ಗ: ಕೋಮು ಪ್ರಚೋದಕ ಭಾಷಣ ಮಾಡಿದ ಆರೋಪದ ಮೇರೆಗೆ ಕ್ರಿಮಿನಲ್ ಮೊಕದ್ದಮೆ ದಾಖಲಾಗಿ ಬಂಧನ ಭೀತಿ ಎದುರಿಸುತ್ತಿದ್ದ ಉಪಮುಖ್ಯಮಂತ್ರಿ ಹಾಗೂ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ಷರತ್ತು ಬದ್ದ ನಿರೀಕ್ಷಣಾ ಜಾಮೀನು ನೀಡಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಆರ್.ಎಂ.ಶೆಟ್ಟರ್, 25 ಸಾವಿರ ರುಪಾಯಿಗಳ ಬಾಂಡ್ ಜೊತೆಗೆ ಸಾಲ್ವೆಂಟ್ ಶ್ಯೂರಿಟಿ ನೀಡಬೇಕು. ದೂರುದಾರರಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬೆದರಿಕೆಹಾಕುವುದಾಗಲಿ ಅಥವಾ ಆಶ್ವಾಸನೆ ನೀಡುವುದಾಗಲಿ ಮಾಡಬಾರದು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಅಗತ್ಯವೆನಿಸಿದ ವೇಳೆ ತನಿಖಾಧಿಕಾರಿ ಮುಂದೆ ಖುದ್ದು ಹಾಜರಾಗುವಂತೆ ಷರತ್ತು ವಿಧಿಸಿ ಜಾಮೀನು ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

