ಮುಕ್ತ, ನಿರ್ಭೀತ ಚುನಾವಣೆಗೆ ಸಹಕರಿಸಿ: ರಂಜಿತ
ಕ.ಪ್ರ.ವಾರ್ತೆ, ತರೀಕೆರೆ, ಏ.24
ಮುಕ್ತ ಮತ್ತು ನಿರ್ಭೀತ ಚುನಾವಣೆ ನಡೆಸಲು ಎಲ್ಲರೂ ಸಹಕರಿಸಬೇಕೆಂದು ಸಹಾಯಕ ಚುನಾವಣಾಧಿಕಾರಿ ತಹಸೀಲ್ದಾರ್ ರಂಜಿತ
ತಿಳಿಸಿದ್ದಾರೆ.
ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ತಾಲೂಕು ಆಡಳಿತ ವತಿಯಿಂದ ಬುಧವಾರ ಪಟ್ಟಣದ ಎಂ.ಜಿ. ಹಾಲ್‌ನಲ್ಲಿ ಮತಗಟ್ಟೆ ಅಧಿಕಾರಿಗಳಿಗೆ, ಸಹಾಯಕ ಮತಗಟ್ಟೆ ಅಧಿಕಾರಿಗಳಿಗಾಗಿ ಏರ್ಪಡಿಸಿದ್ದ ಚುನಾವಣಾ ತರಬೇತಿ ಮತ್ತು ಪ್ರಾತ್ಯಕ್ಷತಾ ಸಭೆಯಲ್ಲಿ ಮಾತನಾಡುತ್ತಿದ್ದರು.
ಶಾಂತಿಯುತವಾಗಿ- ಚುನಾವಣಾ ನಿಯಮ ಮತ್ತು ಕ್ರಮಗಳನ್ನು ಚೆನ್ನಾಗಿ ಅಧ್ಯಯನ ಮಾಡಬೇಕು. ಚುನಾವಣೆಯ ಕೆಲಸ ಕಾರ್ಯಗಳು ಇಡೀ ತಂಡದ ಕಾರ್ಯವಾಗಿರುತ್ತದೆ. ಶಾಸನಬದ್ದ ಜವಾಬ್ದಾರಿ ನಿಮಗಿರುತ್ತದೆ, ನಿಷ್ಪಪಕ್ಷಪಾತ ಮತ್ತು ಬದ್ಧತೆಯಿಂದ ಕೆಲಸ ಮಾಡಬೇಕು, ಮತದಾನದ ರಹಸ್ಯವನ್ನು ಕಾಪಾಡಬೇಕು. ಶಿಸ್ತು ಮತ್ತು ಸಮಯಪಾಲನೆ ಕರಾರುವಾಕ್ಕಾಗಿರಬೇಕು, ಸುಗಮ ಮತದಾನಕ್ಕೆ ಸಲಹೆ ಸೂಚನೆಗಳನ್ನು ಸ್ವಾಗತಿಸಿ, ಮತದಾನ ಶಾಂತಿಯುತವಾಗಿರಲಿ ಎಂದು ಅವರು ತಿಳಿಸಿದರು.
ತರೀಕೆರೆ ವಿಧಾನಸಭಾ ಕ್ಷೇತ್ರದ ಚುನಾವಣಾ ವೀಕ್ಷಕರಾದ ಟಿ.ಎನ್. ವೆಂಕಟೇಶ್ ಅವರು ಮಾತನಾಡಿದರು.
ಚುನಾವಣಾಧಿಕಾರಿ ಜಿ. ಅನುರಾಧ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ದೇವರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಆರ್.ಪರಮೇಶ್ವರಪ್ಪ ಅವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

