ಚಿಕ್ಕಮಗಳೂರು

ವೈದ್ಯರ ಮೇಲೆ ಹಲ್ಲೆ ಖಂಡಿಸಿ ಧರಣಿ

Published On :

ಕ.ಪ್ರ.ವಾರ್ತೆ, ನರಸಿಂಹರಾಜಪುರ, ಏ.24
ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಬಾಲಕೃಷ್ಣ ಅವರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಬುಧವಾರ ಕೆಲ ಸಮಯ ಆಸ್ಪತ್ರೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
3 ದಿನಗಳ ಹಿಂದೆ ತಾಲೂಕಿನ ಕೆರೆಮನೆಯ ಶ್ರೀನಿವಾಸ್ ಎಂಬವರು ಹೊಟ್ಟೆ ನೋವು ಎಂದು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಸಂಜೆ ಡಾ. ಬಾಲಕೃಷ್ಣ ಶ್ರೀನಿವಾಸ್‌ರನ್ನು ಪರೀಕ್ಷಿಸಿ ಮನೆಗೆ ತೆರಲಿದ್ದಾರೆ. ಆ ಸಮಯದಲ್ಲಿ ಡಾ. ಬಾಲಕೃಷ್ಣ ಅವರ ಮನೆಗೆ ಬಂದ ಶ್ರೀನಿವಾಸ್ ಮಗ ಸತೀಶ್ ಹಾಗೂ ಸಂಬಂಧಿ ಕೃಷ್ಣಯೋಗಿ ವೈದ್ಯರೊಂದಿಗೆ ಅನುಚಿತವಾಗಿ ವರ್ತಿಸಿ ಹಲ್ಲೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಆಸ್ಪತ್ರೆ ಸಿಬ್ಬಂದಿ ಹಾಗೂ ಸಾರ್ವಜನಿಕರು ವೈದ್ಯರನ್ನು ರಕ್ಷಿಸಿ ಇಬ್ಬರು ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ಧರಣಿ: ಡಾ. ಬಾಲಕೃಷ್ಣ ಅವರ ಮೇಲೆ ಹಲ್ಲೆ ನಡೆದಿರುವುದನ್ನು ಖಂಡಿಸಿ ಬುಧವಾರ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ಪ್ರತಿಭಟನೆ ನಡೆಸಿದರು. ಮಧ್ಯಾಹ್ನದ ಹೊತ್ತಿಗೆ ಸ್ಥಳಕ್ಕೆ ಜಿಲ್ಲಾ ಪ್ರಭಾರಿ ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟಂಭ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಜಗದೀಶ್ ಆಗಮಿಸಿದರು.
 ಧರಣಿ ನಿರತರನ್ನುದ್ದೇಶಿಸಿ ಜಿಲ್ಲಾ ಪ್ರಭಾರಿ ಆರೋಗ್ಯಾಧಿಕಾರಿ ಡಾ. ಶ್ರೀನಿಸಾಸ್ ಮಾತನಾಡಿ, ವೈದ್ಯರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಹಿಂದೆ ನರಸಿಂಹರಾಜಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇತ್ತು. ಈಗ ವೈದ್ಯರು ಉತ್ತಮ ಸೇವೆ ನೀಡುತ್ತಿದ್ದಾರೆ.
ವೈದ್ಯರ ಮೇಲೆ ಹಲ್ಲೆ ಮಾಡಿದರೆ ವೈದ್ಯರು ಆತ್ಮಸ್ಥೈರ್ಯ ಕಳೆದುಕೊಳ್ಳುತ್ತಾರೆ. ಹಲ್ಲೆ ಮಾಡಿರುವುದನ್ನು ಜಿಲ್ಲಾ ವೈದ್ಯರ ಸಂಘ ಖಂಡಿಸುತ್ತದೆ. ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಸೂಕ್ತ ರಕ್ಷಣೆ ನೀಡುವಂತೆ ಈಗಾಗಲೇ ಜಿಲ್ಲಾ ವೈದ್ಯರ ಸಂಘ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಕಿಡಿಗೇಡಿಗಳ ಕೃತ್ಯದಿಂದ ಸೇವೆ ಸ್ಥಗಿತಗೊಳಿಸುವುದು ಬೇಡ ಎಂದು ಅವರು ಸಲಹೆ ನೀಡಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಕರ್ತವ್ಯ ನಿರತರಾದ ಸರ್ಕಾರಿ ನೌಕರರ ಮೇಲೆ ಹಲ್ಲೆ ಖಂಡನೀಯ. ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ಸೂಕ್ತ ಪೊಲೀಸ್ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಜಗದೀಶ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗೌಸ್ ಮೊಹಿದ್ದೀನ್, ಡಾ. ಮಧೂಸೂದನ್, ಡಾ. ಸುದರ್ಶನ್, ತಾಲೂಕು ಖಾಸಗೀ ವೈದ್ಯರ ಸಂಘದ ಅಧ್ಯಕ್ಷ ಡಾ. ಸುರೇಶ್ ಮಾತನಾಡಿದರು.
ನಂತರ ಸರ್ಕಾರಿ ನೌಕರರ ಸಂಘದಿಂದ ಜಿಲ್ಲಾ ಆರೋಗ್ಯಾಧಿಕಾರಿಗೆ ಮನವಿ ಅರ್ಪಿಸಲಾಯಿತು. ನಂತರ ವೈದ್ಯರು, ಸಿಬ್ಬಂದಿ ತಮ್ಮ ಕರ್ತವ್ಯ ಮಂದುವರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.