ಚಿಕ್ಕಮಗಳೂರು

ಕಾಂಗ್ರೆಸ್ ಅಭ್ಯರ್ಥಿ ಪರ ಹೆಗ್ಡೆ ಮತಯಾಚನೆ

Published On :

ಕ.ಪ್ರ.ವಾರ್ತೆ ಟಿ ಚಿಕ್ಕಮಗಳೂರು ಟಿ  ಏ.25
ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಏ.27ರಂದು ಚಿಕ್ಕಮಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಇದಕ್ಕಾಗಿ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಇದರ ಜತೆಗೆ ನಗರವೂ ಸೇರಿದಂತೆ ಗ್ರಾಮಾಂತರ ಪ್ರದೇಶದಲ್ಲಿ ಗುರುವಾರ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಲೋಕಸಭಾ ಸದಸ್ಯ ಜಯಪ್ರಕಾಶ್ ಹೆಗ್ಡೆಯವರು ಕಾಲ್ನಡಿಗೆ ಮೂಲಕ ಮತಯಾಚನೆ ಮಾಡಿದರು.
ಸೋನಿಯಾಗಾಂಧಿ ಭೇಟಿ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿರುವ ಎಐಸಿಸಿ ವೀಕ್ಷಕರಾದ ಸಂಜಯ್ ಬಾಪ್ನ ಮತ್ತು ಕೃಷ್ಣ ಹೆಗ್ಡೆಯವರು ಚುನಾವಣಾ ಪ್ರಚಾರ ಕಾರ್ಯಕ್ರಮ ನಡೆಯಲಿರುವ ಜಿಲ್ಲಾ ಆಟದ ಮೈದಾನದಲ್ಲಿ ಆಗಿರುವ ಸಿದ್ಧತೆಯನ್ನು ವೀಕ್ಷಿಸಿದರು.
ನಗರದ ನೇಕಾರ ಬೀದಿ, ಸಂತೇ ಮಾರ್ಕೆಟ್, ಅರವಿಂದನಗರದಲ್ಲಿ ಮತಯಾಚನೆ ಮಾಡಿ ಮಾತನಾಡಿದ ಸಂಸದ ಜಯಪ್ರಕಾಶ್ ಹೆಗ್ಡೆ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬರಲಿರುವ ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ, ರಾಜ್ಯಾದ್ಯಂತ ಕಾಂಗ್ರೆಸ್ ಪರ ಅಲೆ ಇದೆ, ಮತದಾರರ ಭಾವನೆ ಇದಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿಶ್ಚಿತ, ಮತದಾರ ಬದಲಾವಣೆ ಬಯಸಿದ್ದಾನೆ ಕ್ಷೇತ್ರದ್ಯಾಂತ ಜನರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಸ್. ಶಾಂತೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್ ಉರಾಳ್, ಎಂ.ಸಿ. ಶಿವಾನಂದಸ್ವಾಮಿ, ಇಂದಾವರ ಲೋಕೇಶ್  ಮತಯಾಚನೆ ಮಾಡಿದರು.
ಪಕ್ಷಕ್ಕೆ ಸೇರ್ಪಡೆ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಹಲವು ಮಂದಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಕಾಂಗ್ರೆಸ್ ಪಕ್ಷಕ್ಕೆ ಸೇರಿದವರನ್ನು ಸಂಸದ ಜಯಪ್ರಕಾಶ್ ಹೆಗ್ಡೆ, ವಿಧಾನಪರಿಷತ್ ಸದಸ್ಯೆ ಮೋಟಮ್ಮ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಕೇಂದ್ರದ ಯುಪಿಎ ಸರ್ಕಾರ ರೈತರ, ಬಡವರ ಪರವಾದ ಹಲವಾರು ಜನಪ್ರಿಯ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಸ್ಥಳೀಯ ಪಂಚಾಯ್ತಿಗಳ ಅಭಿವೃದ್ಧಿಗಾಗಿ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ಉತ್ತಮ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದರು.
ರಾಜ್ಯದಲ್ಲಿ 5 ವರ್ಷಗಳ ಹಿಂದೆ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಜನವಿರೋಧಿ ಆಡಳಿತವನ್ನು ನೀಡಿದ್ದು, ಅತ್ಯಾಚಾರ, ಭ್ರಷ್ಟಾಚಾರ, ಗಣಿ ಹಗರಣ, ಭೂ ಹಗರಣದಲ್ಲಿ ನಿರತರಾಗಿ ಬಡವರಿಗೆ ಪಡಿತರವನ್ನು ಸರಿಯಾಗಿ ನೀಡದೆ ಕೇವಲ ಭ್ರಷ್ಟಾಚಾರದಲ್ಲಿ ನಿರತರಾಗಿದ್ದು, ಈ ಚುನಾವಣೆಯಲ್ಲಿ ಜನರು ಅವರನ್ನು ತಿರಸ್ಕರಿಸುವುದು ಖಚಿತ. ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲವು ಶತಸಿದ್ಧವೆಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮಹಿಳಾ ವಿಭಾಗದ ಅಧ್ಯಕ್ಷೆ ವನಮಾಲ ಮೃತ್ಯುಂಜಯ, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಕೆ.ಎಂ. ನಾಗರಾಜು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೆಂಕಟೇಶ್ ನಾಯ್ಡು, ಕೆಪಿಸಿಸಿ ಸದಸ್ಯ ಕೆ.ಎಂ. ನಾಗರಾಜ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.