ಕೋಮುವಾದಿ ಪಕ್ಷಗಳಿಗೆ ಮತ ಹಾಕಬೇಡಿ: ಅಶೋಕ್
ಕ.ಪ್ರ.ವಾರ್ತೆ ಟಿ ಚಿಕ್ಕಮಗಳೂರು ಟಿ ಏ.25
ಕೋಮುವಾದಿ ಪಕ್ಷಗಳಿಗೆ ಮತವನ್ನು ಹಾಕಬಾರದು ಎಂದು ಕರ್ನಾಟಕ ಕೋಮು ಸೌಹಾರ್ದ ವೇದಿಕೆ ರಾಜ್ಯ ಕಾರ್ಯದರ್ಶಿ ಕೆ.ಎಲ್. ಅಶೋಕ್ ಅವರು ಮತದಾರರಿಗೆ ಮನವಿ ಮಾಡಿದ್ದಾರೆ.
ಬಿಜೆಪಿ ಆಡಳಿತದ 5 ವರ್ಷಗಳು ಮಹಾದ್ರೋಹದ ಕರಾಳ ದಿನಗಳು ಪುಸ್ತಕವನ್ನು ಗುರುವಾರ ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜನರು ಪ್ರತಿದಿನ ಕರಾಳ ದಿನಗಳನ್ನು ಎದುರಿಸಿದ್ದಾರೆ. ಈ ಚುನಾವಣೆಯಲ್ಲಿ ಜನ ವಿರೋಧಿ, ಕೋಮುವಾದಿ ಬಿಜೆಪಿಯನ್ನು ತಿರಸ್ಕರಿಸಬೇಕು ಎಂದು ಕರೆ ನೀಡಿದರು.
ಎಲ್ಲಾ ಪಕ್ಷಗಳ ಆರ್ಥಿಕ ನೀತಿ ಒಂದೇ,. ಬಿಜೆಪಿ ಬರೀ ಪಕ್ಷವಲ್ಲ, ಇದು ಜಾತಿ ಪದ್ಧತಿಯನ್ನು ಪೋಷಿಸಿಕೊಂಡು ಬರುತ್ತಿದೆ ಎಂದು ಆರೋಪಿಸಿದರು. ವೇದಿಕೆಯ ಮುಖಂಡರಾದ ಗೌಸ್ ಮೊಹಿಯುದ್ದೀನ್, ಹಸನಬ್ಬ ಇದ್ದರು.
ಇಂದು ಕಡೂರಿಗೆ ಸಿಎಂ
ಕಡೂರು: ಪಟ್ಟಣಕ್ಕೆ ಬಿಜೆಪಿ ಅಭ್ಯರ್ಥಿ ಬೀರೂರು ದೇವರಾಜು ಅವರ ಪರ ಚುನಾವಣಾ ಪ್ರಚಾರ ಕೈಗೊಳ್ಳಲು ಏ.26ರಂದು ಸಿಎಂ ಶೆಟ್ಟರ್ ಆಗಮಿಸಲಿದ್ದಾರೆ. ಪಟ್ಟಣಕ್ಕೆ 12 ಗಂಟೆಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಕೆ.ಎಸ್. ಸೋಮಪ್ರಸಾದ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

