'ನಗರ ಪ್ರದೇಶದಲ್ಲಿ ಮತದಾನ ಜಾಗೃತಿ ಅಗತ್ಯ'
ಕ.ಪ್ರ.ವಾರ್ತೆ ಟಿ ಚಿಕ್ಕಮಗಳೂರು ಟಿ ಏ.25
ವಿಧಾನಸಭಾ ಚುನಾವಣೆಯಲ್ಲಿ ನಗರ ಪ್ರದೇಶದ ಮತದಾನದ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಲು ಮತದಾನದ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಹಾಗೂ ಸ್ವೀಪ್ ನೋಡೆಲ್ ಅಧಿಕಾರಿ ಎಚ್.ಜಿ. ಚಂದ್ರಶೇಖರಯ್ಯ ಹೇಳಿದ್ದಾರೆ.
ತರೀಕೆರೆಯಲ್ಲಿ ಸ್ವೀಪ್ ಸಮಿತಿ ವತಿಯಿಂದ ಬುಧವಾರ ಆಯೋಜಿಸಿದ್ದ ನಗರ ಪ್ರದೇಶದ ಮತದಾರರಿಗೆ ಅರಿವು ಉಂಟು ಮಾಡುವ ಮನೆ ಮನೆ ಭೇಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮತದಾನ ಅರಿವು: ಕಳೆದ ಎರಡು ಚುನಾವಣೆಯಲ್ಲಿ ಮತದಾನದ ಪ್ರಮಾಣವು ಕಡಿಮೆಯಾಗುತ್ತಿದ್ದು, ನಗರ ಪ್ರದೇಶದಲ್ಲಿ ಮತದಾನದ ಪ್ರಮಾಣವು ಗ್ರಾಮೀಣ ಭಾಗಕ್ಕೆ ಹೋಲಿಸಿದರೆ ಕಡಿಮೆ ಇರುವುದು ನಾವು ಕಾಣಬಹುದಾಗಿದೆ ಎಂದ ಅವರು, ನಗರ ಪ್ರದೇಶದ ಮತದಾರರಿಗೆ ಮತದಾನ ಮಾಡುವ ಬಗ್ಗೆ ಅರಿವು ಉಂಟು ಮಾಡಲು ಮನೆ ಮನೆ ಭೇಟಿ ಕಾರ್ಯಕ್ರಮ ನಡೆಯಲಿದೆ ಎಂದರು.
ಮನೆ ಮನೆ ಭೇಟಿ ಕಾರ್ಯಕ್ರಮವು ಏ.23ರಿಂದ 29ರ ವರೆಗೆ ನಡೆಯಲಿದೆ ಎಂದ ಅವರು, ಕಾರ್ಯಕ್ರಮದಲ್ಲಿ 23 ತಂಡಗಳು ಭಾಗವಹಿಸಲಿದ್ದು, ತಂಡದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಪುರಸಭೆ ಸಿಬ್ಬಂದಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸ್ವೀಪ್ ತಾಲೂಕು ಸಮಿತಿಯ ಅಧ್ಯಕ್ಷ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಣಾಧಿಕಾರಿ ದೇವರಾಜಪ್ಪ ಮಾತನಾಡಿ, ಅರಿವು ಉಂಟು ಮಾಡುವ ತಂಡಗಳ ಸದಸ್ಯರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕೆಂದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪರಮೇಶ್ವರಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎ.ಎಸ್. ಶ್ರೀಧರ್, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಮಂಜುನಾಥ್, ಪುರಸಭೆ ಮುಖ್ಯಾಧಿಕಾರಿ ಪಲ್ಲವಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

