ಚಿಕ್ಕಮಗಳೂರು

ಸದೃಢ ದೇಹಕ್ಕೆ ಯೋಗ ಸಹಕಾರಿ

Published On :

ಕ.ಪ್ರ.ವಾರ್ತೆ, ತರೀಕೆರೆ, ಏ.25 ಶರೀರ ಸದೃಢವಾಗಲು ಯೋಗ ಸಹಕಾರಿಯಾಗಿದ್ದು, ಪ್ರತಿದಿನವೂ ಯೋಗಾಭ್ಯಾಸ ಮಾಡಿದರೆ ಮನಶ್ಶಾಂತಿಯೂ ಸಾಧ್ಯ ಎಂದು ಪಟ್ಟಣದ ಎಸ್.ಜೆ.ಎಂ. ಕಾಲೇಜು ಉಪನ್ಯಾಸಕ ಪ್ರೊ. ಆರ್.ವಿ ಹೆಗಡಾಳ್ ಹೇಳಿದರು.
ಅವರು, ಗುರುವಾರ ಎಸ್.ಜೆ.ಎಂ. ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ವೇದಿಕೆ, ಎನ್ನೆಸ್ಸೆಸ್ ಘಟಕಗಳ ವತಿಯಿಂದ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಉಚಿತ ಯೋಗ ತರಬೇತಿ ಶಿಬಿರದ ಉದ್ಘಾಟನಾ  ಸಮಾರಂಭದಲ್ಲಿ ಮಾತನಾಡಿದರು.
ಪ್ರೊ. ಜಿ.ಎನ್. ಬಸವರಾಜಪ್ಪ ಕಾರ್ಯಕ್ರಮ ಉದ್ಘಾಟಿಸಿ, ಹುಟ್ಟಿದ ಮೇಲೆ ಪ್ರತಿಯೊಬ್ಬರೂ ಸಾಯುತ್ತಾರೆ.  ಅದು ನಿಶ್ಚಿತ, ಅಲ್ಲಿಯವರೆಗೆ ಮನುಷ್ಯ ಆರೋಗ್ಯವಂತನಾಗಿರಬೇಕು ಎಂದು ತಿಳಿಸಿದರು. ಕಾಲೇಜು ಗ್ರಂಥಾಲಯ ಅಧಿಕಾರಿ ಸಿ. ಜಯದೇವಪ್ಪ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಮುದಾಯಕ್ಕೆ ಉಪಯುಕ್ತವಾಗುವಂತಹ ಇಂತಹ ಕಾರ್ಯಕ್ರಮ  ಏರ್ಪಡಿಸಿರುವುದು ಶ್ಲಾಘನೀಯ ಎಂದರು.
ಪ್ರೊ.  ಪಿ. ಲಿಂಗಪ್ಪ ಯೋಗ ಶಿಬಿರಕ್ಕೆ ಚಾಲನೆ ನೀಡಿದರು. ರಕ್ಷಿತಾ ಸ್ವಾಗತಿಸಿದರು.
ದೋರನಾಳು ಯೋಗ ಶಿಕ್ಷಕ ಮೋಹನ್ ಅವರು ನಡೆಸುತ್ತಿರವ ಈ ಯೋಗ ಶಿಬಿರದಲ್ಲಿ ಮಕ್ಕಳು ವಯಸ್ಕರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.