ಚಿಕ್ಕಮಗಳೂರು

ಅಭಿವೃದ್ಧಿ ವಿರೋಧಿಗೆ ಪಾಠ ಕಲಿಸಿ

Published On :

ಕ.ಪ್ರ.ವಾರ್ತ್ಣೆ ಚಿಕ್ಕಮಗಳೂರು    ಏ.26
ಅಭಿವೃದ್ಧಿಯ ವಿರೋಧಿಗಳಾದ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿಯ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಕರೆ ನೀಡಿದ್ದಾರೆ.
ಸಖರಾಯಪಟ್ಟಣದಲ್ಲಿ ಶುಕ್ರವಾರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾತಿ ಪ್ರಯೋಗ, ಹಣ ಕೊಟ್ಟರೂ ಅವರ ಮಾತನ್ನು ಕೇಳಬೇಡಿ ಎಂದು ಕಿವಿ ಮಾತು ಹೇಳಿದರು.
ನಾನು ನಿಮ್ಮ ಮನೆಯ ಮಗ: ನಾನು ನಿಮ್ಮ ಮನೆಯ ಮಗ, ಯಾರಿಗೂ ಮೋಸ ಮಾಡಿಲ್ಲ. ರೇಸಾರ್ಟ್ ರಾಜಕಾರಣ ಮಾಡಿಲ್ಲ. ಸಿಕ್ಕ ಅಧಿಕಾರದ ಅವಧಿಯಲ್ಲಿ ಕ್ಷೇತ್ರವನ್ನು ಅಭಿವೃದ್ಧಿ ಮಾಡಿದ್ದೇನೆ. ಕಾಲೋನಿಗಳು, ತಾಂಡ್ಯಗಳು ಅಭಿವೃದ್ಧಿ ಹೊಂದಿವೆ. ಸಖರಾಯಪಟ್ಟಣದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಇಲ್ಲಿನ ಕಾಲುವೆಗಳನ್ನು ಅಭಿವೃದ್ಧಿಗೊಳಿಸಲಾಗಿದೆ. 20 ವರ್ಷ ಒಂದೇ ಮನೆತನದವರಿಗೆ ವೋಟ್ ಹಾಕಿದ್ರಿ, ಇಷ್ಟೋಂದು ಅಭಿವೃದ್ಧಿ ಆಗಿರಲಿಲ್ಲ. ಹೊಟ್ಟೆ ಕಿಚ್ಚಿಗೆ ನಮ್ಮ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನಡವಳಿಕೆ ಮತ್ತು ಕೆಲಸವನ್ನು ನೋಡಿ ಸಿ.ಟಿ. ರವಿ ಎಲ್ಲರಿಕ್ಕಿಂತ ಉತ್ತಮವಾಗಿದ್ದರೆ ವೋಟ್  ಹಾಕಿ. ಈ ನೈತಿಕತೆ ಅವರಿಗಿಲ್ಲ ಎಂದರು.
ವ್ಯಕ್ತಿಗಿಂತ ಪಕ್ಷ ದೊಡ್ಡದು: ಕೆ.ಎಂ. ರಸ್ತೆ ಡಾಂಬರೀಕರಣ ಮಾಡಲಾಗಿದೆ. ಬೆಳವಾಡಿಯಿಂದ ದೇವನೂರು ಕೆರೆಗೆ ನೀರು ಹಾಯಿಸಿ, ಬಾಗಿನ ಅರ್ಪಿಸಲು ದಂಪತಿ ಸಮೇತರಾಗಿ ಬರುತ್ತೇನೆ. ನಾನು ಅನ್ಯಾಯದ ಕೆಲಸ ಯಾವತ್ತೂ ಮಾಡಿಲ್ಲ. ನನಗಿಂತ ಪಕ್ಷ ದೊಡ್ಡದು, ಪಕ್ಷಕ್ಕಿಂತ ದೇಶ ದೊಡ್ಡದು. ವಿರೋಧಿಗಳು ಅಪಪ್ರಚಾರ ಮಾಡುತ್ತಿದ್ದಾರೆ. ತಾವು ಮಾಡದೆ, ಮಾಡಲು ಬಿಡದವರಿಗೆ ಬುದ್ಧಿ ಕಲಿಸಿ, ಪರೀಕ್ಷೆ ಮಾಡಿ ವೋಟ್ ಮಾಡಿ, ಜೆಡಿಎಸ್ ಮತ್ತು ಕಾಂಗ್ರೆಸ್‌ನವರಿಗೆ ತಮ್ಮಗಳ ಯೋಗ್ಯತೆ ಏನೆಂದು ಪ್ರಶ್ನಿಸಿದ ಅವರು, ಜಿಲ್ಲೆಯಲ್ಲಿ ಮೂರು ಮಂದಿ ಮಂತ್ರಿಗಳಾಗಿದ್ದರು.
   ಅವರ ಕಾಲದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಮೆಡಿಕಲ್ ಕಾಲೇಜು, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು  ತರಲು ಆಗಲಿಲ್ಲ. ಪತ್ನಿ ಎಂಎಲ್‌ಸಿ ಆಗಿದ್ದಾರೆ. ಇದೀಗ ಪತಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಕುಟುಂಬ ರಾಜಕಾರಣ ಮಾಡುವವರಿಗೆ ಪಾಠ ಕಲಿಸಿ ಎಂದು ಹೇಳಿದರು.
ಕ್ಷೇತ್ರ ಬಹಳಷ್ಟು ಅಭಿವೃದ್ಧಿ: ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಚಿವ ಸಿ.ಟಿ. ರವಿ ಅವರು ಕ್ಷೇತ್ರವನ್ನು ಅಭಿವೃದ್ಧಿಗೊಳಿಸಿದ್ದಾರೆ. ಹಿಂದಿನ ಚಿಕ್ಕಮಗಳೂರಿಗೂ ಈಗಿನ ಚಿಕ್ಕಮಗಳೂರಿಗೂ ಬಹಳಷ್ಟು ವ್ಯತ್ಯಾಸವಾಗಿದೆ. ಎಲ್ಲಾ ರಸ್ತೆಗಳು ಅಭಿವೃದ್ಧಿ ಹೊಂದಿದೆ. ಅಭಿವೃದ್ಧಿಗೆ ಆದ್ಯತೆ ನೀಡಿರುವ ಸಚಿವ ಸಿ.ಟಿ. ರವಿ ಅವರನ್ನು ಈ ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಕೆ. ಪ್ರಾಣೇಶ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು. ಮಾಜಿ ಸಂಸದ ದಿವಂಗತ ಡಿ.ಸಿ. ಶ್ರೀಕಂಠಪ್ಪ ಅವರ ಪುತ್ರ ಡಿ.ಎಸ್. ಅಶೋಕ್ ಅವರು ಕೆಜೆಪಿ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.