ಚಿಕ್ಕಮಗಳೂರು

ಜನ ವಿರೋಧಿ ಬಿಜೆಪಿಗೆ ತಕ್ಕಪಾಠ ಕಲಿಸಿ: ಪುಟ್ಟೇಗೌಡ

Published On :

ಕ.ಪ್ರ.ವಾರ್ತೆ, ಮೂಡಿಗೆರೆ, ಏ.26
ಆಡಳಿತಾರೂಢ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ಧ ಈ ಬಾರಿಯ ಚುನಾವಣೆಯಲ್ಲಿ ಜನರು ಮತದಾನ ನಡೆಸಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಂಸದ ಡಿ.ಎಂ.ಪುಟ್ಟೇಗೌಡ ಹೇಳಿದರು.
ಅವರು ಶುಕ್ರವಾರ ಮೂಡಿಗೆರೆ ಮೀಸಲು ಕ್ಷೇತ್ರದ ಮಾಕೋನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಪರ ಮತ ಯಾಚನೆ ನಡೆಸಿ ಮಾತನಾಡುತ್ತಿದ್ದರು.
  ಹಿಂದಿನ ಯಾವುದೇ ಸರ್ಕಾರ ನಡೆಸದಿರುವ ಭ್ರಷ್ಟ ಆಡಳಿತವನ್ನು ಬಿಜೆಪಿ ಸರ್ಕಾರ ಐದು ವರ್ಷಗಳಲ್ಲಿ ನೀಡಿದೆ. ಹಗರಣಗಳಿಂದ ಒಬ್ಬರ ಹಿಂದೊಬ್ಬರಂತೆ ಜೈಲುಪಾಲಾಗುತ್ತಿರುವ ಬಿಜೆಪಿಗರಿಂದ ಸಮರ್ಥ ಆಡಳಿತ ಸಾಧ್ಯವಿಲ್ಲ. ಅಲ್ಲದೇ ಪ್ರಾದೇಶಿಕ ಪಕ್ಷಗಳಿಂದ ನಾಡಿನದಿರಲಿ, ಕ್ಷೇತ್ರದ ಅಭಿವೃದ್ಧಿಯೂ ಕನಸಿನ ಮಾತು ಎಂದರು.
  ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಮಾತನಾಡಿ, ಕಳೆದ ಸಲ ಅತ್ಯಲ್ಪ ಮತಗಳಿಂದ ಸೋತಿದ್ದೇನೆ. ನಿಮ್ಮ ಮನೆಯ ಮಗನಾಗಿ ಮತ್ತೆ ಚುನಾವಣೆ ಎದುರಿಸುತ್ತಿದ್ದು, ನನಗೆ ಆಶೀರ್ವದಿಸಿದರೆ ನಿಮ್ಮ ಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು. ಈ ಸಂದರ್ಭದಲ್ಲಿ ಹಲವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.