ಬಿಜೆಪಿ ವಿರುದ್ಧ ಸ್ವಪಕ್ಷೀಯರಿಂದ ಅಪಪ್ರಚಾರ
ಕ.ಪ್ರ.ವಾರ್ತೆ, ನರಸಿಂಹರಾಜಪುರ.ಏ.26: ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಶಾಸಕ ಡಿ.ಎನ್. ಜೀವರಾಜ್ ಹೇಳುತ್ತಿದ್ದಾರೆ. ಆದರೆ ಬಿಜೆಪಿ ವಿರುದ್ಧ ಬಿಜೆಪಿಯಿಂದ ನೊಂದವರೇ ಆರೋಪ ಮಾಡುತ್ತಿದ್ದಾರೆಯೇ ಹೊರತು ಕಾಂಗ್ರೆಸ್ನವರಲ್ಲ ಎಂದು ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಹೇಳಿದರು.
ಅವರು ಗುರುವಾರ ಜೈಲ್ ಬಿಲ್ಡಿಂಗ್ ಸರ್ಕಲ್ನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಮಾಡಿ, ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಕ್ಷೇತ್ರದಲ್ಲಿ 14 ಅಭ್ಯರ್ಥಿಗಳು ಕಾಂಗ್ರೆಸ್ನ ಟಿಕೆಟ್ ಆಕಾಂಕ್ಷಿಗಳಾಗಿದ್ದರು.
ಆದರೆ ನನಗೆ ಬಿ.ಫಾರಂ ಸಿಕ್ಕಿದ ನಂತರ ಎಲ್ಲರೂ ನನ್ನೊಂದಿಗೆ ಕೈ ಜೋಡಿಸಿ ಕೆಲಸ ಮಾಡುತ್ತಿದ್ದಾರೆ ಎಂದರು.
ಸ್ವಜನ ಪಕ್ಷಪಾತ, ಗುಂಪುಗಾರಿಕೆಗೆ ಅವಕಾಶ ಇಲ್ಲದಂತೆ ಕಾರ್ಯನಿರ್ವಹಿಸುತ್ತೇನೆ. ಶೃಂಗೇರಿ ಕ್ಷೇತ್ರದಲ್ಲಿರುವ ಅಡಕೆ ಹಳದಿ ಎಲೆ ರೋಗ, ಕುಡಿಯುವ ನೀರು, ನಿರುದ್ಯೋಗ, ಹುಲಿ ಸಂರಕ್ಷಣಾ ಯೋಜನೆ ಸಮಸ್ಯೆ ಒತ್ತುವರಿ ಸಮಸ್ಯೆಗಳನ್ನು ಬಗೆ ಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಯೋಜನೆ ಸಿದ್ಧವಾಗಿದೆ: ಈಗಾಗಲೇ ನಾನು ಶೃಂಗೇರಿ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಜನಪರ ಯೋಜನೆ ರೂಪಿಸಿಕೊಂಡಿದ್ದೇನೆ. ಸಾಮಾನ್ಯ ಜನರ ಸಮಸ್ಯೆ ಬಗ್ಗೆ ಮೊದಲ ಆದ್ಯತೆ ನೀಡುತ್ತೇನೆ.
ಈ ಕ್ಷೇತ್ರದಲ್ಲಿ ಯಾವುದೇ ವರ್ಗದವರು ಸಮಸ್ಯೆ ಪರಿಹಾರ ಕೇಳಿ ಧರಣಿ ಆಗದಂತೆ ಮಾಡುವ ಕನಸು ಕಂಡಿದ್ದೇನೆ. ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬಂದರೆ ಎಲ್ಲಾ ಸಮಸ್ಯೆಗಳೂ ಅತಿ ಶೀಘ್ರದಲ್ಲೇ ಬಗೆಹರಿಯಲಿದೆ ಎಂದರು.
ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಕೆ.ಎಂ. ಗಂಗಾಧರ್, ಸಚಿನ್ ಮೀಗ, ಆರ್. ಸದಾಶಿವ, ಟಿ.ವಿ. ರಾಜು, ಮೀನಾಕ್ಷಿ ಕಾಂತರಾಜ್, ಲೇಖಾ ವಸಂತ್, ಕೆ.ವಿ. ವಸಂತಕುಮಾರ್, ಕೆ.ಎ. ಅಬೂಬಕರ್, ಇ.ಸಿ. ಶೇವಿಯಾರ್ ಮೊದಲಾದವರಿದ್ದರು. ಬೂತ್ ಸಮಿತಿ ಅಧ್ಯಕ್ಷ ರಘುಶೆಟ್ಟಿ ಸ್ವಾಗತಿಸಿದರು. ಮಥಾಯ್ ವಂದಿಸಿದರು.
ಪ್ರಚಾರ ಸಭೆಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ದಿಂದ ಕಾಂಗ್ರೆಸ್ಗೆ ಸೇರ್ಪಡೆಗೊಂಡ ಕಾರ್ಯಕರ್ತರನ್ನು ಬರಮಾಡಿಕೊಳ್ಳಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

