ಕಾಂಗ್ರೆಸ್ ಅಧಿಕಾರಿಕ್ಕೆ: ಶಾಂತೇಗೌಡ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಏ.26
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಅಭ್ಯರ್ಥಿ ಕೆ.ಎಸ್. ಶಾಂತೇಗೌಡ ಹೇಳಿದ್ದಾರೆ.
ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿಯ ಕುರುವಂಗಿ, ಕರ್ತಿಕೆರೆ, ಬಿಳಿಕಲ್ಲು, ಚಿಕ್ಕನಹಳ್ಳಿ, ಬಂಡಿಹಳ್ಳಿ ಮಲ್ಲೆದೇವರಹಳ್ಳಿ ಇನ್ನಿತರ ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗಗಳಲ್ಲಿ ಹಲವಾರು ಸಮಸ್ಯೆಗಳು ನಮ್ಮ ಗಮನಕ್ಕೆ ಬಂದಿವೆ. ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ರಸ್ತೆ, ಚರಂಡಿ ವ್ಯವಸ್ಥೆಗಳಿಂದ ವಂಚಿತವಾಗಿವೆ. ಅಭಿವೃದ್ಧಿ ಕೆಲಸ ಮಾಡುವುದಕ್ಕೆ ಅವಕಾಶ ಮಾಡಿಕೊಡಿ ತಮ್ಮನ್ನು ಆಯ್ಕೆ ಮಾಡಿದಲ್ಲಿ ಪಕ್ಷ ಅಧಿಕಾರ ಬಂದ ನಂತರ ಇವುಗಳ ಅಭಿವೃದ್ಧಿ ಮೊದಲ ಆದ್ಯತೆ ನೀಡಲಾಗುವುದು ಎಂದರು.
ನೀರಿನ ಸಮಸ್ಯೆ: ಗ್ರಾಮದ ಮುಖಂಡ ಜಯಣ್ಣ ಮಾತನಾಡಿ, ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಎಂಟು ದಿನಗಳಿಗೊಮ್ಮೆ ಕುಡಿಯುವ ನೀರು ಲಭ್ಯವಾಗುತ್ತಿದೆ, ಗ್ರಾಮೀಣ ಸಂಪರ್ಕ ರಸ್ತೆಗಳು ಅಭಿವೃದ್ಧಿಯಾಗಿಲ್ಲ ಗ್ರಾಮಸ್ಥರ ಕಾರ್ಯಕ್ರಮಗಳಿಗೆ ಸಮುದಾಯ ಭವನದ ಅಗತ್ಯವಿದೆ ಎಂದರು.
ಕಾಂಗ್ರೆಸ್ ಮುಖಂಡ ಎಂ.ಸಿ. ಶಿವಾನಂದಸ್ವಾಮಿ ಮಾತನಾಡಿ, ಚುನಾವಣೆ ಎನ್ನುವುದು ಮತದಾರನಿಗೆ ಒಂದು ಹಬ್ಬವಿದ್ದಂತೆ ಐದು ವರ್ಷಗಳಿಗೊಮ್ಮೆ ಬರುವ ಹಬ್ಬವನ್ನು ಮತದಾನ ಮಾಡುವ ಮೂಲಕ ಆಚರಿಸಬೇಕು ಎಂದರು.
ಗ್ರಾಮದ ಮುಖಂಡರಾದ ದೊಡ್ಡರಂಗಪ್ಪ ಶೆಟ್ಟರು, ಚೌಡಪ್ಪ ಶೆಟ್ಟರು, ಮಾಜಿ ಜಿಪಂ ಸದಸ್ಯ ಅಣ್ಣೇಗೌಡ ಮಾತನಾಡಿದರು. ಸಭೆಯಲ್ಲಿ ರಂಗನಾಥಸ್ವಾಮಿ, ಜಗದೀಶ್, ಸುನೀಲ್, ಜಯಣ್ಣ ಮತ್ತು ಪಕ್ಷದ ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.
ಕಾಂಗ್ರೆಸ್ಗೆ ಸೇರ್ಪಡೆ: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಕಚೇರಿಯಲ್ಲಿ ಜಿಲ್ಲೆಯ ಪ್ರಮುಖ ಕೆಜೆಪಿ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷವನ್ನು ಸೇರಿದರು.
ಎಐಸಿಸಿ ವೀಕ್ಷಕ ಕೃಷ್ಣ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಮೂರ್ತಿ, ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎ.ಎನ್. ಮಹೇಶ್, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಕೆ. ಮಹಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್ ಉರಾಳ್, ಹಿಂದುಳಿದ ವರ್ಗಗಳ ಅಧ್ಯಕ್ಷ ಕೆ.ಎಂ. ನಾಗರಾಜ್, ಜೇಮ್ಸ್ ಡಿಸೋಜ, ನಗರಸಭಾ ಸದಸ್ಯ ರೂಬೆನ್ ಮೊಸೆಸ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

