ಚಿಕ್ಕಮಗಳೂರು

ಕಾಂಗ್ರೆಸ್ ಬೆಂಬಲಿಸಲು ದಸಂಸ ತೀರ್ಮಾನ

Published On :

ಕೊಪ್ಪ: ಶೃಂಗೇರಿ ಕ್ಷೇತ್ರ ದಲಿತ ಸಂಘರ್ಷ ಸಮಿತಿ ಈ ಬಾರೀ ವಿಧಾನಸಭಾ ಚುನಾವಣೆಗೆ ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೇಸ್ ಬೆಂಬಲಿಸುವ ತೀರ್ಮಾನ ತೆಗೆದುಕೊಂಡಿದೆ ಎಂದು ಶೃಂಗೇರಿ ತಾಲೂಕು ಸಂಚಾಲಕ ಶಿವಣ್ಣ ಪಿ. ತಿಳಿಸಿದ್ದಾರೆ.
 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರವಾಗಿದ್ದು, ಈ ಸರ್ಕಾರದ ಅವಧಿಯಲ್ಲಿ ದಲಿತರಿಗೆ ಪ್ರಮುಖ ಖಾತೆ. ಹುದ್ದೆ ದೊರಕಿಲ್ಲ ಮತ್ತು ಈ ಸರ್ಕಾರ ಆರ್‌ಎಸ್‌ಎಸ್ ನಿಯಂತ್ರಣದಲ್ಲಿದ್ದು, ಅಂಬೇಡ್ಕರವರ ಸಂವಿಧಾನದ ಆಯಗಳನ್ನು ಗಾಳಿಗೆ ತೂರಲು ಹೊರಟಿದೆ ಎಂದು ಆರೋಪಿಸಿದರು.  ದಲಿತರು, ಮಹಿಳೆಯರು, ರಕ್ಷಣೆ ಇಲ್ಲದಂತಾಗಿದೆ. ದಲಿತ ನೌಕರರನ್ನು ಬಹಳ ಅವಮಾನಕರವಾಗಿ ನಡೆಸಿಕೊಳ್ಳಲಾಗಿದೆ. ಆದ್ದರಿಂದ ಈ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿಸುವುದಾಗಿ ತಿಳಿಸಿದರು. ಕೊಪ್ಪ ತಾಲೂಕು ಸಂಚಾಲಕ ಬಿ.ಎಚ್. ಪ್ರಭಾಕರ್, ಎನ್.ಆರ್.ಪುರ ತಾಲೂಕಿನ ಸಂಚಾಲಕರಾದ ರಾಮು ಮೊದಲಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.