ಚಿಕ್ಕಮಗಳೂರು

ದತ್ತ ಪರ ಪತ್ನಿ ಬಿರುಸಿನ ಪ್ರಚಾರ (ಸುದ್ದಿ ಸಂಕ್ಷೇಪ)

Published On :

ಬೀರೂರು: ಕಡೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಇಳಿದಿರುವ ವೈ.ಎಸ್.ವಿ. ದತ್ತರವರ ಪರವಾಗಿ ಅವರ ಪತ್ನಿ ನಿರ್ಮಲಾ ದತ್ತ ಕಳೆದ ಎರಡು ದಿನಗಳಿಂದ ಸುಡು ಬಿಸಿಲನ್ನು ಲೆಕ್ಕಿಸದೆ ಬೀರೂರು ಪಟ್ಟಣದ ವಿವಿಧ ಬಡಾವಣೆಗಳಿಗೆ ತೆರಳಿ ಮತಯಾಚಿಸುತ್ತಿದ್ದಾರೆ. ನೂರಾರು ಸಂಖ್ಯೆಯಲ್ಲಿ ನಿಷ್ಟಾವಂತ ಮಹಿಳಾ ಕಾರ್ಯಕರ್ತೆಯರ ಪಡೆಯೊಂದಿಗೆ ಮನೆ ಮನೆಗೆ ತೆರಳಿ ಕರಪತ್ರಗಳನ್ನು ಹಂಚಿ ಈ ಭಾರಿಯ ಚುನಾವಣೆಯಲ್ಲಿ ದತ್ತಾರವರನ್ನು ಬಹುಮತದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಕಡೂರು ವಿಧಾನಸಭಾ ಕ್ಷೇತ್ರದ  ಜನತೆ ಕ್ಷೇತ್ರದ ಅಭಿವೃದ್ಧಿ ಬಯಸಿದ್ದು ಜಾತಿ ರಾಜಕೀಯಕ್ಕೆ ತಿಲಾಂಜಲಿ ನೀಡಿ ಪ್ರೀತಿ ರಾಜಕೀಯ ಅಪ್ಪಿಕೊಳ್ಳುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿ ಕ್ಷೇತ್ರದ ಮತದಾರರು ಬದಲಾವಣೆ ಬಯಸಿದ್ದಾರೆ. ಕ್ಷೇತ್ರದ ಮತದಾರರು ಜೆಡಿಎಸ್ ಪಕ್ಷದ ಕಡೆ ಒಲವು ತೋರುತ್ತಿದ್ದು ಸಾಮಾಜಿಕ ನ್ಯಾಯ, ಸಮಾನತೆ, ಸಾಮಾಜಿಕ ಕಳಕಳಿ ಹೊಂದಿರುವ ಜೆಡಿಎಸ್ ಪಕ್ಷವನ್ನು ಕ್ಷೇತ್ರದ ಜನತೆ ಬೆಂಬಲಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಪ್ರಜ್ಞಾವಂತ ಮತದಾರರು ಕ್ಷೇತ್ರದ ಪ್ರಗತಿಯ ಹಿತದೃಷ್ಟಿಯನ್ನಿರಿಸಿಕೊಂಡು ಈ ಬಾರಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸುತ್ತಾರೆ ಎಂಬ ಆಶಯ ವ್ಯಕ್ತಪಡಿಸಿದರು. ಮತಯಾಚನೆ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯ ಬಿ.ಪಿ.ನಾಗರಾಜ್, ಪುರಸಭಾ ಸದಸ್ಯೆ ವಸಂತಮ್ಮ, ಉಮಾಶಂಕರ್, ಹರಿಪ್ರಸಾದ್, ಬಿ.ಎಂ. ಮಧು ಹಾಗು ನೂರಾರು ಕಾರ್ಯಕರ್ತರು ಮತಯಾಚನೆಯಲ್ಲಿ ಪಾಲ್ಗೊಂಡಿದ್ದರು.
ಪದ್ಮಾ ತಿಮ್ಮೇಗೌಡ ಮತಯಾಚನೆ
ತರೀಕೆರೆ: ತರೀಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಟಿ.ಆರ್. ನಾಗರಾಜ್ ಪರ ಪಕ್ಷದ ರಾಜ್ಯ ಉಪಾಧ್ಯಕ್ಷೆ ಪದ್ಮಾ ತಿಮ್ಮೇಗೌಡ ಅವರು      ಸಮೀಪದ ಶಿವನಿ ಗ್ರಾಮದಲ್ಲಿ ಮತಯಾಚನೆ ಮಾಡಿದರು. ಪದ್ಮಾತಿಮ್ಮೇಗೌಡ ಅವರು ಮಾತನಾಡಿ, ಎಚ್.ಡಿ. ಕುಮಾರಸ್ವಾಮಿ ಅವರ ಇಪ್ಪತ್ತು ತಿಂಗಳ ಆಡಳಿತದಲ್ಲಿ ಉತ್ತಮ ಆಡಳಿತ ನೀಡಿದ್ದಾರೆ.  ಗ್ರಾಮವಾಸ್ತವ್ಯ ಇತ್ಯಾದಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಿದ್ದಾರೆ, ಪಕ್ಷದ ಅಭ್ಯರ್ಥಿ ಟಿ.ಆರ್. ನಾಗರಾಜ್ ಅವರಿಗೆ ಹೆಚ್ಚಿನ ಮತ ನೀಡಿ ಗೆಲ್ಲಿಸಿಕೊಡಬೇಕೆಂದು ಮನವಿ ಮಾಡಿದರು. ಪಕ್ಷದ ಅಭ್ಯರ್ಥಿ  ನಾಗರಾಜ್ ಮಾತನಾಡಿ, ಹೆಚ್ಚಿನ ಮತ ನೀಡಿ  ಗೆಲ್ಲಿಸಬೇಕೆಂದರು. ಮುಖಂಡರಾದ ಕೃಷ್ಣಪ್ಪ, ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
29ರಂದು ಅನಂತ್ ಪ್ರವಾಸ
ಶೃಂಗೇರಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಏ.29 ರಂದು ಶೃಂಗೇರಿಗೆ ಭೇಟಿ ನೀಡಿ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ. ಬೆ.11 ಗಂಟೆಗೆ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಪರ ಮತ ಯಾಚಿಸಲಿದ್ದಾರೆ. ಪಕ್ಷದ ಮುಖಂಡರುಗಳು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.