'ಅಭಿವೃದ್ಧಿ ನೋಡಿ ಬಿಜೆಪಿಗೆ ಮತ ನೀಡಿ'
ಕ.ಪ್ರ.ವಾರ್ತೆ , ಕಡೂರು , ಏ.27
ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಂಡಿರುವ ಕೋಟ್ಯಂತರ ರೂಗಳ ಅಭಿವೃದ್ಧಿ ನೋಡಿ ಬಿಜೆಪಿಗೆ ಮತ ನೀಡಬೇಕು ಎಂದು ಶಾಸಕ ಡಾ ವೈ.ಸಿ. ವಿಶ್ವನಾಥ್ ಹೇಳಿದರು.
ಅವರು ಕಡೂರು ಕ್ಷೇತ್ರದ ಎಂ. ಕೋಡೀಹಳ್ಳಿ, ಮಚ್ಚೇರಿ, ಮಲ್ಲೇಶ್ವರ, ಮಲ್ಲಿದೇವಿಹಳ್ಳಿ ಮತ್ತಿತರ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಬೀರೂರು ದೇವರಾಜು ಪರವಾಗಿ ಚುನಾವಣಾ ಪ್ರಚಾರ ಕೈಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರ ನಡೆಸಿದ ಪಕ್ಷಗಳು ಗ್ರಾಮಗಳನ್ನು ಅಭಿವೃದ್ಧಿಗೊಳಿಸದೆ ನಿರ್ಲಕ್ಷಿಸಿದವು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಅಭಿವೃದ್ಧಿ ಕಾಣದ ಹಿಂದುಳಿದವರ ಮತ್ತು ಪರಿಶಿಷ್ಟ ವರ್ಗದ ಕಾಲೋನಿ ಮತ್ತು ತಾಂಡಾಗಳ ಅಭಿವೃದ್ಧಿಗೆ ಆದ್ಯತೆ ನೀಡಿದ ಮೊದಲ ಸರ್ಕಾರ ಬಿಜೆಪಿ ಎಂಬುದು ಹೆಗ್ಗಳಿಕೆಯಾಗಿದೆ ಎಂದು ಹೇಳಿದರು.
ಕಾಂಕ್ರೀಟ್ ರಸ್ತೆ, ಚರಂಡಿ, ಸಮದಾಯ ಭವನ ನಿರ್ಮಾಣ ಮಾಡುವ ಮೂಲಕ ಶಿಕ್ಷಣಕ್ಕೆ ಆದ್ಯತೆ ನೀಡಿ ಸಾಮಾಜಿಕ ನ್ಯಾಯ ನೀಡಿ ಕೋಟ್ಯಂತರ ರೂ ಅನುದಾನ ನೀಡಿ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಆದ್ಯತೆ ನೀಡಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಜನಸಾಮಾನ್ಯರ ಪರವಾಗಿರುವ ಬೀರೂರು ದೇವರಾಜು ಅವರಿಗೆ ಮತ ನೀಡಿ ಬಿಜೆಪಿ ಪಕ್ಷ ಗೆಲ್ಲಿಸಿ ಕ್ಷೇತ್ರಕ್ಕೆ ಇನ್ನಷ್ಟು ಅಭಿವೃದ್ಧಿ ಮಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಅಭ್ಯರ್ಥಿ ಬೀರೂರು ದೇವರಾಜು ಮಾತನಾಡಿ, ನಾನು ಕೂಡ ಹಿಂದುಳಿದ ಸಮುದಾಯದಿಂದ ಬಂದವನಾಗಿದ್ದು ಹಿಂದುಳಿದ ಉಪ್ಪಾರ ಸಮುದಾಯದ ಹೆಚ್.ಸಿ. ನೀರಾವರಿಯವರ ಅವಧಿ ಮುಗಿದ ಮೇಲೆ ರಾಜಕೀಯವಾಗಿ ಮತ್ತೆ ಈ ಸಮುದಾಯಕ್ಕೆ ಅವಕಾಶ ಮಾಡಿಕೊಡಬಹುದಿತ್ತು. ಆದರೆ ಈ ಜನಾಂಗವನ್ನು ರಾಜಕೀಯವಾಗಿ ಮಾತ್ರ ಬಳಸಿಕೊಳ್ಳಲಾಗಿದೆ ಎಂದರು.
ಜಿ.ಪ. ಉಪಾಧ್ಯಕ್ಷೆ ಮಾಲಿನಿಬಾಯಿ ರಾಜನಾಯ್ಕ ಮಾತನಾಡಿ, ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ನಮ್ಮ ತಾಂಡಾಗಳು, ಪರಿಶಿಷ್ಟ ವರ್ಗಗಳ ಕಾಲೋನಿಗಳ ಅಭಿವೃದ್ದಿ ಕೈಗೊಂಡು ಬಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಿದೆ. ದೇವರಾಜು ಅರವನ್ನು ಮತದಾರರು ಗೆಲ್ಲಿಸಬೇಕು ಎಂದರು.
ಜಿಲ್ಲಾ ಬಿಜೆಪಿ ಮುಖಂಡ ಶಂಕರ್ ಮಾತನಾಡಿದರು. ನಾನ್ಯಾನಾಯ್ಕ, ರುದ್ರಪ್ಪ, ಚೇತನ ನಾಯ್ಕ, ಶಶಿಧರ್, ಜಗನ್ನಾಥ್, ಜಗದೀಶ್, ರಾಜಾನಾಯ್ಕ, ಮಂಜುನಾಥ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

