ಜೆಡಿಎಸ್ ಪರ ದತ್ತ ಮತಯಾಚನೆ
ಕ.ಪ್ರ.ವಾರ್ತೆ,ಕಡೂರು , ಏ.27
ಕಡೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೈ.ಎಸ್.ವಿ. ದತ್ತ ಪರವಾಗಿ ಕಡೂರು ಪಟ್ಟಣದ ಜೆಡಿಎಸ್ ನಗರ ಘಟಕದಿಂದ ಮನೆ ಮನೆಗೆ ತೆರಳಿ ಮತಯಾಚನೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಡೂರು ಪಟ್ಟಣದ ಶ್ರೀ ಚಂದ್ರಮೌಳೇಶ್ವರ ದೇವಾಲಯದಲ್ಲಿ ನಗರ ಘಟಕದ ಅಧ್ಯಕ್ಷ ಭಂಢಾರಿ ಶ್ರೀನಿವಾಸ್, ಮುಖಂಡರಾದ ಕೆ.ಹೆಚ್. ಲಕ್ಕಣ್ಣ, ಎನ್. ಇಮಾನ್ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.
ಮತ ನೀಡಲು ಮನವಿ: ನಂತರ ಮುಖಂಡರು ಹಾಗೂ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತ್ತು ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತದಾರರಿಗೆ ಜೆಡಿಎಸ್ ಪಕ್ಷಕ್ಕೆ ಮತ ನೀಡುವಂತೆ ಕೋರಿದರು.
ಇದೇ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಮಾತನಾಡಿ, ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 2008 ರಿಂದಲೂ ಎಲ್ಲ ಸಮುದಾಯಗಳ ಪ್ರೀತಿ ವಿಶ್ವಾಸದಿಂದಾಗಿ ವೈ.ಎಸ್.ವಿ. ದತ್ತರವರು ಕಡೂರು ಕ್ಷೇತ್ರದಲ್ಲಿ ಹೊಸ ರೀತಿಯ ರಾಜಕಾರಣ ಆರಂಭಿಸಿ ಜಾತಿ ರಾಜಕಾರಣ ಹೊಡೆ ದೋಡಿಸುವ ಮೂಲಕ ಪ್ರೀತಿ ರಾಜಕಾರಣಕ್ಕೆ ಚಾಲನೆ ನೀಡಿದ್ದಾರೆ ಎಂದರು.
ಜನ ಬೆಂಬಲ: ಆ ಮೂಲಕ ಕಳೆದ 2008 ಮತ್ತು 2010ರಲ್ಲಿ ಕ್ಷೇತ್ರದ ಮತದಾರ ಪ್ರಭುಗಳು ದತ್ತರವರನ್ನು ಬೆಂಬಲಿಸುವ ಮೂಲಕ ಹೆಚ್ಚಿನ ಮತಗಳನ್ನು ನೀಡುತ್ತಾ ಬೆಂಬಲಿಸುತ್ತಾ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಭಾರಿಯೂ ಕೂಡ ಅದೇ ಪ್ರೀತಿಯನ್ನು ತೋರಿಸುತ್ತಿರುವ ಜನರ ಪ್ರೀತಿಗೆ ಪಾತ್ರರಾಗಿರುವ ದತ್ತರವರಿಗೆ ಬೆಂಬಲಿಸುವ ಮೂಲಕ ಎಲ್ಲ ವರ್ಗಗಳ ಮತ ನೀಡಿ ಗೆಲ್ಲಿಸಲಿದ್ದಾರೆ ಎಂದರು.
ಪ್ರಚಾರ ಕಾರ್ಯದಲ್ಲಿ ಮುಖಂಡರಾದ ಕೆ.ಎಸ್. ತಿಪ್ಪೇಶ್, ಬಸಣ್ಣ, ಕಾಂತರಾಜು, ರಮೇಶ್, ಬಿ. ಶಿವಪ್ಪ, ವೆಂಕಟೇಶ್, ಮಂಜುನಾಥ್, ಪ್ರಭಾಕರ್, ಕೃಷ್ಣಮೂರ್ತಿ, ಕುಮಾರಣ್ಣ, ಲೋಕೇಶ್ ಸೇರಿದಂತೆ ಹಲವಾರು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

